HomePage_Banner_
HomePage_Banner_

ಡಿ.8: ಮುಖ್ಯಮಂತ್ರಿ ಯಡಿಯೂರಪ್ಪ ಬೆಳ್ತಂಗಡಿಗೆ ;347 ಕೋಟಿ ರೂ.ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಇಲಾಖೆಗಳ ವತಿಯಿಂದ ಮಂಜೂರಾಗಿರುವ 347 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರು ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಶಿಲಾನ್ಯಾಸಗೊಳಿಸುವ ಮೂಲಕ ಚಾಲನೆಗೊಳಿಸಲಿದ್ದಾರೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಡಿ.4 ರಂದು ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ತಾಲೂಕಿನ ಎಲ್ಲಾ 81 ಗ್ರಾಮಗಳಿಗೆ ಸಂಬಂಧಿಸಿದಂತೆ ಜನತೆಯ ಮೂಲಭೂತ ಸೌಕರ್ಯಗಳೂ ಒಳಗೊಂಡಂತೆ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಯ
ದೂರದೃಷ್ಠಿ ಇಟ್ಟುಕೊಂಡು ಈ ಯೋಜನೆಗಳನ್ನು ಮಂಜೂರುಗೊಳಿಸಿ ಅನುದಾನ ತರಲಾಗಿದ್ದು ಇದರ ಶಿಲಾನ್ಯಾಸ
ಕಾರ್ಯಕ್ರಮವನ್ನು ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಗಳೊಂದಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಣ್ಣ ನೀರಾವರಿ ಸಚಿವ ಜಿ.ಪಿ ಮಾಧುಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಗ್ರಾಮೀಣಾಭಿವೃಧ್ದಿ ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ನಳಿನ್ ಕುಮಾರ್ ಕಟೀಲು , ವಿಧಾನಪರಿಷತ್ ಶಾಸಕ ಆಯನೂರು ಮಂಜುನಾಥ್, ಜಿ. ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲೆಯ ಶಾಸಕರುಗಳು ಒಳಗೊಂಡಂತೆ ತಾಲೂಕಿನ ಎಲ್ಲ್ಲಾ ಚುನಾಯಿತ ಜನಪ್ರತಿನಿಧಿಗಳು ಪಾಳ್ಗೊಳ್ಳಲಿದ್ದು ತಾಲೂಕಿನ ಜನತೆಗೆ ಇದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸೀತಾರಾಮ.ಬಿ.ಎಸ್ ಮತ್ತು ಪ್ರಭಾಕರ ಶೆಟ್ಟಿ ಉಪ್ಪಡ್ಕ, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಕೊರಗಪ್ಪ ನಾಕ, ಮಮತಾ .ಎಂ.ಶೆಟ್ಟಿ ಮತ್ತು ಸೌಮ್ಯಲತಾ ಜಯಂತ ಗೌಡ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಎಂ.ಕಲ್ಮಂಜ, ತಾ. ಪಂ ಸದಸ್ಯ ಕೃಷ್ಣಯ್ಯ ಆಚಾರ್ಯ, ಅಂಡಿಂಜೆ ಗ್ರಾ. ಪಂ ಅಧ್ಯಕ್ಷ ಮೋಹನ ಅಂಡಿಂಜೆ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.