ಕಳೆಂಜ: ಕಳೆಂಜ ಗ್ರಾ.ಪಂ.ನ ನೂತನ ಕಟ್ಟಡ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ನಿಡ್ಲೆ-ಕಳೆಂಜ ಊರಿನವರು ನಿರ್ಮಿಸಿಕೊಟ್ಟ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಕಳೆಂಜ ಶಾಖೆಯ ಉದ್ಘಾಟನಾ ಸಮಾರಂಭವು ಡಿ.14 ರಂದು ಕಳೆಂಜ ಗ್ರಾ.ಪಂ ವಠಾರದಲ್ಲಿ ಜರುಗಿತು.
ಕಾರ್ಯಕ್ರಮ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಗ್ರಾ.ಪಂ ಅಧ್ಯಕ್ಷೆ ಶಾರದಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ತಾ.ಪಂ ಸದಸ್ಯೆ ಸುಶೀಲ, ಜಿ.ಪಂ ಎಂಜಿನಿಯರಿಂಗ್ ಉಪವಿಭಾಗ ಸಹಾಯಕ ಕಾರ್ಯಪಾಲಕ ಅಭಿಯಂತಕ ಚೆನ್ನಪ್ಪಮೊಯ್ಲಿ ಉಪಸ್ಥಿತರಿದ್ದರು. ವಿಶೇಷ ಆಹ್ವಾನಿತರಾಗಿ ದ.ಕ ಜಿಲ್ಲಾ ಸಹಕಾರಿ ಬ್ಯಾಂಕ್ನ ನಿರ್ದೇಶಕರಾದ ನಿರಂಜನ್ ಬಿ, ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಧನಂಜಯ ಗೌಡ, ತಾ.ಪಂ ಕಾರ್ಯನಿರ್ವಹಣಾದಿಕಾರಿ ಕೆ.ಇ ಜಯರಾಂ, ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶಾರದಾ, ಉಪಾಧ್ಯಕ್ಷ ರಾಜೇಶ್, ಪಂ.ಅಭಿವೃದ್ಧಿ ಅಧಿಕಾರಿ ಅಭಿನಯ ಆರ್, ಗ್ರಾ.ಪಂ ಸದಸ್ಯರು, ಪ್ರಾ.ಕೃ.ಪ.ಸ್.ಸಂ ನಿರ್ದೇಶಕರು, ಮುಖ್ಯಕಾರ್ಯನಿರ್ವಣಾಧಿಕಾರಿ ಪದ್ಮನಾಭ, ಕಳೆಂಜ ಸಹಕಾರಿ ಸಂಘದ ಶಾಖಾ ವ್ಯವಸ್ಥಾಪಕ ಕೃಷ್ಣ ಪ್ರಸಾದ್ ಉಪಸ್ಥಿತರಿದ್ದರು. ನಿತ್ಯಾನಂದ ರೈ ಸ್ವಾಗತಿಸಿ, ಗಂಗಾಧರ ಭ೦ಡಾರಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.