HomePage_Banner_
HomePage_Banner_

ಅಂಗನವಾಡಿ ನೌಕರರ ಹಕ್ಕೊತ್ತಾಯ, ಸಮಾವೇಶ,ಸನ್ಮಾನ

ಬೆಳ್ತಂಗಡಿ : ದ.ಕ.ಜಿಲ್ಲಾ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಸಹಕಾರ ಸಂಘದ ಸಮಾಜ ಸೇವಾಂಜಲಿ ಟ್ರಸ್ಟ್ ಜಂಟಿ ಆಶ್ರಯದಲ್ಲಿ, ಡಿ.12 ರಂದು ಕುದ್ರೋಳಿ ಗೋಕರ್ಣನಾಥ ದೇವಸ್ಥಾನ ಸಭಾಂಗಣದಲ್ಲಿ ಜರಗಿತು.

ಮಂಗಳೂರು ಶಾಸಕ ವೇದವ್ಯಾಸ ಕಾಮತ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ, ಬಡವರಿಗೆ,ಮಹಿಳೆಯರಿಗೆ ಸರಕಾರದಿಂದ ನೀಡುವ ಯೋಜನೆಗಳನ್ನು ಯಶಸ್ವಿಯಾಗಿ ಜನರಿಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಕೆಲಸ ಶ್ಲಾಘನೀಯ.ಇಂತಹ ನೌಕರರ ಬಾಳು ಬೆಳಗುವಂತೆ ಮಾಡುವುದು ಸರಕಾರದ ಕರ್ತವ್ಯ.ಇಲ್ಲಿಯವರೆಗೆ ಗೌರವ ಧನದಲ್ಲಿಯೇ ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ನೌಕರರ ಸಮಸ್ಯೆ ನಿವಾರಣೆಗೆ ರಾಜ್ಯ ಸರಕಾರ ಬದ್ಧವಾಗಿದೆ.ಅಯಾ ತಾಲೂಕಿನ ಅಂಗನವಾಡಿ ನೌಕರರು ತಮ್ಮ ಕ್ಷೇತ್ರದ ಶಾಸಕರ ಮೂಲಕ ಮುಖ್ಯ ಮಂತ್ರಿ ಸಲ್ಲಿಸಬೇಕು. ಕೆಲವೇ ದಿನಗಳಲ್ಲಿ ವಿಧಾನಸಭೆ ಅಧಿವೇಶನವೂ ಆರಂಭವಾಗುವುದರಿಂದ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.

ಶೈಕ್ಷಣಿಕ ಸಾಲ ವಿತರಣೆ – ನಿವೃತ್ತಿ ಹೊಂದಿದ ಕಷ್ಟದಲ್ಲಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಟ್ರಸ್ಟ್ ವತಿಯಿಂದ ನೆರವು ನೀಡಲಾಯಿತು. ಹಾಗೂ ಎಸ್.ಎಸ್.ಎಲ್.ಸಿ.ಯಲ್ಲಿ ಅತ್ಯಂತ ಹೆಚ್ಚು ಅಂಕ ಪಡೆದ ಕಾರ್ಯಕರ್ತೆ,ಸಹಾಯಕಿಯರ ಮಕ್ಕಳಿಗೆ ಅಭಿನಂದನೆ, ಶೈಕ್ಷಣಿಕ ನೆರವು ಮತ್ತು ತಾಲೂಕು ಮಟ್ಟದ ಪ್ರಶಸ್ತಿಗೆ ಗುರುತಿಸಲ್ಪಟ್ಟ ಉಜಿರೆ ಅಜಿತ್ ನಗರದ ಅಂಗನವಾಡಿ ಕಾರ್ಯಕರ್ತೆ ಜಯಂತಿ ಮತ್ತು ಸಹಾಯಕಿ ಶೋಭ ಇವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.) ಜಿಲ್ಲಾ ಪಂಚಾಯತ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅ.ಮಂ.ಖಜಾಂಚಿ ಪದ್ಮರಾಜ್ ಆರ್.ಮಂಗಳೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾರಾಣಿ,ಜಿ.ಪಂ.ಸದಸ್ಯೆ ಧನಲಕ್ಷ್ಮಿಗಟ್ಟಿ,ತಾ.ಕ.ಸಾ.ಪ.ಅಧ್ಯಕ್ಷೆ ವಿಜಯ ಲಕ್ಕ್ಮಿ ಬಿ.ಶೆಟ್ಟಿ, ಸಂಘದ ರಾಜ್ಯಧ್ಯಕ್ಷೆ ಜಯಲಕ್ಷ್ಮಿ ಬಿ.ಆರ್. ಪ್ರಸ್ತಾವಿಕ ಮಾತನಾಡಿದರು.ಸುಮಾರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಬೆಳ್ತಂಗಡಿ ತಾಲೂಕಿನಿಂದ 250 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಭಾಗವಹಿಸಿದ್ದರು.ಜಿಲ್ಲಾ ಸಂಘದ ಉಪಾಧ್ಯಕ್ಷೆ ಶಶಿಕಲಾ ಕೆ.ಇಂದಬೆಟ್ಟು ಸನ್ಮಾನಿತರ ಪರಿಚಯ ಪತ್ರವನ್ನು ವಾಚಿಸಿದರು.ಬೆಳ್ತಂಗಡಿ ತಾಲೂಕು ಸಂಘದ ಅಧ್ಯಕ್ಷೆ ರಾಜೀವಿ ಕೆ.ಸಿ. ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು ಸಹಕರಿಸಿದರು.ಸಂಘದ ಜಿಲ್ಲಾಧ್ಯಕ್ಷೆ ಸುಳ್ಯ ಲತಾ ಅಂಬೆಕಲ್ಲು ಸ್ವಾಗತಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.