ಕಾಲೇಜು ಬಿಟ್ಟು ಮನೆಯಲ್ಲಿದ್ದ ಯುವತಿ ನಾಪತ್ತೆ: ಠಾಣೆಗೆ ದೂರು

ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟು ಮನೆಯಲ್ಲಿದ್ದ ಇಂದಬೆಟ್ಟು ಗ್ರಾಮದ ಪೇರಲ್ದಪಲ್ಕೆ ನಿವಾಸಿನಿ ಗೀತಾ ಅವರ ಪುತ್ರಿ ವಿದ್ಯಾ (19ವ.) ಎಂಬವರು ಡಿ. 12 ರಂದು ಇದೇ ಗ್ರಾಮದ ಶಾಂತಿನಗರ ಎಂಬಲ್ಲಿನ ತನ್ನ ಅಜ್ಜಿಯ ಮನೆಗೆ ಹೋಗಿ ಬರುವುದಾಗಿ ಹೇಳಿಮನೆಯಿಂದ ಹೋದಾಕೆ ನಾಪತ್ತೆಯಾಗಿದ್ದಾರೆ ಎಂದು ತಾಯಿ ಗೀತಾ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಪ್ರಥಮ ಪದವಿ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ ಆಕೆ ಮನೆಯಲ್ಲೇ ಇದ್ದಳು ಎಂಬುದಾಗಿ ದೂರುದಾರರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.