ಡಿ.21ರ ರಾತ್ರಿ ತನಕ ದ.ಕ.ಜಿಲ್ಲೆಯಲ್ಲಿ 144 ಸಿ.ಆರ್.ಪಿ.ಸಿಯಂತೆ ನಿಷೇದಾಜ್ಞೆ ಜಾರಿ – ಜಿಲ್ಲಾಧಿಕಾರಿ ಆದೇಶ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ಕಾಯ್ದೆ ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಅಖಿಲ ಭಾರತ್ ಬಂದ್ ಮಾಡುವ ಕರೆಕೊಟ್ಟಿರುವ ಮಾಹಿತಿ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಡಿ.18 ರಿಂದ ರಾತ್ರಿ ಗಂಟೆ 9 ರಿಂದ ಡಿ.21ರ ರಾತ್ರಿ ಗಂಟೆ. 11.59ರ ತನಕ ದ.ಕ.ಜಿಲ್ಲೆಯಲ್ಲಿ 144 ಸಿ.ಆರ್.ಪಿ.ಸಿಯಂತೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ಆದೇಶ ಹೊರಡಿದ್ದಾರೆ.

ಡಿ.19 ಮತ್ತು 20ರಂದು ಸಿಎಬಿ ಮತ್ತು ಎನ್.ಆರ್.ಸಿ ಯನ್ನು ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಅಖಿಲ ಭಾರತ್ ಬಂದ್‌ಗೆ ಕರೆಕೊಟ್ಟಿರುವ ಮತ್ತು ಮಂಗಳೂರು ನೆಹರು ಮೈದಾನದಲ್ಲಿ ಸಂರಕ್ಷಣಾ ಸಮಾವೇಶ ನಡೆಸಲಿರುವುದಾಗಿ ಕೆಲವು ಮಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಸದ್ರಿ ಸಂದೇಶದಲ್ಲಿ ಪೌರತ್ವ ಸಂರಕ್ಷಣಾ ಸಮಾವೇಶಕ್ಕೆ ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳು ಮತ್ತು ಎಲ್ಲಾ ಸಮುದಾಯಗಳು ಕೂಡಾ ಈ ಒಂದು ಹೋರಾಟದಲ್ಲಿ ಭಾಗಿಯಾಗುವಂತೆ ದ.ಕ.ಜಿಲ್ಲಾ ಖಾಝಿ ಶೈಖುನಾ ತ್ವಾಕ ಅಹ್ಮದ್ ಮುಸ್ಲಿಯಾರ್ ಕರೆ ಎಂಬುದಾಗಿರುತ್ತದೆ. ಈ ನಿಟ್ಟಿನಲ್ಲಿ ದ.ಕ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಿಂದ ಮಂಗಳೂರು ನಗರಕ್ಕೆ ಸಮಾವೇಶಕ್ಕೆ ತೆರಳುವ ಸಾಧ್ಯತೆ ಇರುತ್ತದೆ. ಈ ಸಮಯ ಜಿಲ್ಲೆಯಿಂದ ತೆರಳುವಾಗ ಮತ್ತು ಹಿಂತಿರುಗುವಾಗ ಅಹಿತಕರ ಘಟನೆ ನಡೆಯುವ ಸಾಧ್ಯತೆಗಳು ಇರುತ್ತದೆ. ಮಸೂದೆಯನ್ನು ವಿರೋಧಿಸಿ ದ.ಕ.ಜಿಲ್ಲೆಯಾದ್ಯಂತ ಬಂದ್ ನಡೆದರೆ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆ ಇರುತ್ತದೆ. ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗದಂತೆ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಗಟ್ಟುವ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗರೂಕತಾ ಕ್ರಮವಾಗಿ ಡಿ.18 ರಿಂದ ಡಿ.21ರ ತನಕ ದ.ಕ.ಜಿಲ್ಲೆಯ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಬರುವ ಬಂಟ್ವಾಳ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಕಲಂ 144 ಸಿಆರ್‌ಪಿಸಿಯಂತೆ ನಿಷೇದಾಜ್ಞೆಯನ್ನು ಜಾರಿಗೊಳಿಸುವಂತೆ ಕೋರಿ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ಪ್ರಸ್ತಾವನೆಗೆ ಮತ್ತು ಪ್ರಸಕ್ತ ವಿದ್ಯಾಮಾನಗಳನ್ನು ಗಣನೆಗೆ ತೆಗೆದು ಕೊಂಡು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ಆದೇಶ ಹೊರಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.