HomePage_Banner_
HomePage_Banner_

ನಾಳೆ ಡಿ.20ರಂದು ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ರಜೆ

* ಶಾಲಾ ವಾರ್ಷಿಕೋತ್ಸವ ಮುಂದೂಡಿಕೆ
* ಮದ್ಯ ಮಾರಾಟ ಬಂದ್

ಬೆಳ್ತಂಗಡಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ನಡೆದಿರುವ ಹಿನ್ನೆಲೆಯಲ್ಲಿ ಪುತ್ತೂರು, ಕಡಬ, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮಂಗಳೂರು ತಾಲೂಕು ಒಳಗೊಂಡಂತೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಿಂದ ಪದವಿ ಕಾಲೇಜುವರೆಗೆ ದ.20ರಂದು ರಜೆ ಘೋಷಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಪ್ರಸ್ತಾವನೆಯಂತೆ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ‘ಸುದ್ದಿ’ಗೆ ತಿಳಿಸಿದ್ದಾರೆ

ಮದ್ಯ ಮರಾಟ ಬಂದ್:
ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ಸಾರ್ವಜನಿಕ ಹಿತದೃಷ್ಟಿಯಿಂದ, ಕರ್ನಾಟಕ ಅಬಕಾರಿ ಕಾಯಿದೆ 1965  ಸೆಕ್ಷನ್ 21(1)ರ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಬಾರ್ ಆಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ / ಮದ್ಯ ಮಾರಾಟ ಕೇಂದ್ರಗಳನ್ನು ಡಿ.19ರ ಅಪಾರಹ್ನ ಗಂಟೆ 6 ರಿಂದ ಡಿ.21 ಬೆಳಿಗ್ಗೆ ಗಂಟೆ 6ರ ತನಕ ಮದ್ಯಮುಕ್ತ ದಿನಗಳೆಂದು ಘೋಷಿಸಿ ಸನ್ನದು ಆವರಣಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಹಾಗೂ ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಮರಾಟ ಕೇಂದ್ರಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.
ಅಬಕಾರಿ ಇಲಾಖೆಯಿಂದ ಕಡ್ಡಾಯ ಸೀಲು:
ಮದ್ಯ ಮಾರಾಟವನ್ನು ಕಡ್ಡಾಯವಾಗಿ ಬಂದ್ ಮಾಡುವಂತೆ ಆದೇಶವನ್ನು ಜಿಲ್ಲಾಧಿಕಾರಿಯವರು ಕಟ್ಟು ನಿಟ್ಟಾಗಿ ಜ್ಯಾರಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. ನಿಷೇದಾಜ್ಞೆ ಇರುವ ಸಮಯದಲ್ಲಿ ಆ ವ್ಯಾಪ್ತಿಗೊಳಪಟ್ಟ ಬಾರ್‌ನ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು(ಸೀಲು) ಗಳನ್ನು ಕಡ್ಡಾಯವಾಗಿ ಮಾಡುವಂತೆ ಸೂಚಿಸಿದ್ದಾರೆ. ಹೊಟೇಲುಗಳಲ್ಲಾಗಲೀ, ನಾನ್ ಪ್ರೋಪ್ರೈಟರಿ ಕ್ಲಬ್‌ಗಳಲ್ಲಾಗಲೀ, ಸ್ಟಾರ್ ಹೊಟೇಲ್‌ಗಳಲ್ಲಾಗಲೀ, ಕ್ಲಬ್‌ಗಳಲ್ಲಾಗಲೀ, ಮದ್ಯ ಮಾರಾಟ ಅಥವಾ ಸರಬರಾಜು ಮಾಡುವುದನ್ನು ಕೂಡಾ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ವಾರ್ಷಿಕೋತ್ಸವ ಮುಂದೂಡಿಕೆ:
ತಾಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಬೆನ್ನಲ್ಲೆ ಇದೀಗ ಡಿ.20ರಂದು ಕೆಲವು ಶಾಲೆಗಳಲ್ಲಿ ನಡೆಯಬೇಕಾಗಿದ್ದ ವಾರ್ಷಿಕೋತ್ಸವವನ್ನೂ ಮುಂದೂಡಲಾಗಿದೆ.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.