ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜತೆ ಗೆಜ್ಜೆಗಿರಿ ಕ್ಷೇತ್ರ ಪ್ರಮುಖರ ಮಾತುಕತೆ, ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ

ಬೆಳ್ತಂಗಡಿ: ಫೆ.24ರಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ಮೂಲಸ್ಥಾನ ಗರಡಿ ನೇಮೋತ್ಸವಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಕ್ಷೇತ್ರದ ಪ್ರಮುಖರು ಜ.6 ರಂದು ಭೇಟಿ ಮಾಡಿ  ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಆಶೀರ್ವಚನ ನೀಡುವಂತೆ ಈ ಸಂದರ್ಭ ಕ್ಷೇತ್ರದ ವತಿಯಿಂದ ಆಹ್ವಾನಿಸಲಾಯಿತು.

ದೇಯಿ ಬೈದ್ಯೆತಿ- ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ನಿವೃತ್ತ ಎಸ್‌ಪಿ ಪೀತಾಂಬರ ಹೇರಾಜೆಯವರ ನೇತೃತ್ವದ ತಂಡ ಫೆ.29ರಂದು ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಆಶೀರ್ವಚನ ನೀಡುವಂತೆ ಈ ಸಂದರ್ಭ ಡಾ. ಹೆಗ್ಗಡೆಯವರಲ್ಲಿ ಮನವಿ ಮಾಡಲಾಯಿತು. ಡಾ.ಹೆಗ್ಗಡೆಯವರು ಸಮ್ಮತಿಸಿ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಅಭಯ ಕ್ಷೇತ್ರದ ಮೇಲಿರಲಿ ಎಂದು ಹರಸಿದರು.

ಮೂಡುಬಿದಿರೆ ಬಿಲ್ಲವ ಸಂಘದ ಅಧ್ಯಕ್ಷ ರಾಜು ಪೂಜಾರಿ ಕಾಶಿಪಟ್ಣ, ಬೆಳ್ತಂಗಡಿ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಕಾಪಿನಡ್ಕ, ಕ್ಷೇತ್ರಾಡಳಿತ ಸಮಿತಿಯ ಕಾರ್ಯಕಾರಿ ಸದಸ್ಯ ಸಂತೋಷ್ ಕುಮಾರ್ ಕೊಟ್ಟಿಂಜ, ಆಂತರಿಕ ಲೆಕ್ಕಪರಿಶೋಧಕ ಶೇಖರ್ ಬಂಗೇರ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಯಶವಂತ ದೇರಾಜೆಗುತ್ತು, ಗೆಜ್ಜೆಗಿರಿ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ನಾವರ, ಬ್ರಹ್ಮಕಲಶೋತ್ಸವ ಸ್ವಯಂ ಸೇವಕ ಸಮಿತಿಯ ಸಂಚಾಲಕ ನಾರಾಯಣ ಮಚ್ಚಿನ, ಧರ್ಮಸ್ಥಳ ವಲಯ ಪ್ರಧಾನ ಸಂಚಾಲಕ ಪುರುಷೋತ್ತಮ ಮೂಡಂಗಲ್ಲು, ಸಂಚಾಲಕ ಪ್ರಭಾಕರ ಧರ್ಮಸ್ಥಳ ಉಪಸ್ಥಿತರಿದ್ದರು. 

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.