ಸುಳ್ಯ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ಗೌರವ

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ, ಜಿಲ್ಲಾ ಸಂಘದ ಕಲ್ಪನೆಯ ಪತ್ರಕರ್ತರ ಗ್ರಾಮ ವಾಸ್ತವ್ಯದ ದೇಶದ ಪ್ರಪ್ರಥಮ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಿದ್ದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘವನ್ನು ಗೌರವಿಸಲಾಯಿತು.


ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆಯೋಜನೆಯ ವರ್ಷದಲ್ಲಿ ಸಂಘದ ಅಧ್ಯಕ್ಷರಾಗಿದ್ದ ಮನೋಹರ ಬಳಂಜ ಅವರು ಈ ಗೌರವವನ್ನು ಸ್ವೀಕರಿಸಿದರು. ಅಂದು ಆ ಕಾರ್ಯಕ್ರಮದಲ್ಲೂ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಅಧಿಕಾರಿ, ಜಿ.ಪಂ ಸಿಇಒ ಡಾ. ಸೆಲ್ವಮಣಿ ಈ ಸ್ಮರಣಿಗೆ ನೀಡಿದರು. ಈ ಸಂದರ್ಭ ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್, ಎಡಿಶನಲ್ ಎಸ್.ಪಿ ವಿಕ್ರಂ ಅಮ್ಟೆ, ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.