ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಆಶ್ರಯದಲ್ಲಿ ಭಾರತ ಮಾತಾ ಪೂಜನಾ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ , ಮಹಿಳಾ ಮೋರ್ಚಾ ಆಶ್ರಯದಲ್ಲಿ ಭಾರತ ಮಾತಾ ಪೂಜನಾ ಕಾರ್ಯಕ್ರಮ ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಜ.11 ರಂದು ನಡೆಯಿತು.
ಶಾಸಕ ಹರೀಶ್ ಪೂಂಜ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಫೌರತ್ವ ಕಾಯಿದೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಕಾಯಿದೆಯಿಂದ ನಮ್ಮ ದೇಶಕ್ಜೆ ಆಗಬುದಾಗಿರುವ ಲಾಭದ ಕುರಿತು ಜನರಿಗೆ ಬಿಜೆಪಿ ಕಾರ್ಯಕರ್ತರು ಮನವರಿಕೆ ಮಾಡಿಕೊಡುವ ಮೂಲಕ ಪೌರತ್ವ ಕಾಯಿದೆಗೆ ಬೆಂಬಲ ನೀಡಬೇಕು ಎಂದರು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಮಮತಾ ಎಂ. ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮೀ, ತಾಪಂ ಉಪಾಧ್ಯಕ್ಷೆ ವೇದಾವತಿ, ಸದಸ್ಯೆ ಅಮಿತಾ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.