HomePage_Banner_
HomePage_Banner_

ಬಳಂಜ: ಜಿಲ್ಲಾ ಮಟ್ಟದ ಯುವಜನ ಮೇಳಕ್ಕೆ ಚಾಲನೆ

ಬಳಂಜ: ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ದ.ಕ.ಜಿ.ಪಂ, ತಾ.ಪಂ ಬೆಳ್ತಂಗಡಿ, ಗ್ರಾ.ಪಂ ಬಳಂಜ, ದ.ಕ ಜಿಲ್ಲಾ ಯುವಜನ ಒಕ್ಕೂಟ, ತಾ.ಯುವಜನ ಒಕ್ಕೂಟ ಬೆಳ್ತಂಗಡಿ, ಶ್ರೀ.ಕ್ಷೇ.ಧ.ಗ್ರಾ.ಯೋಜನೆ, ಶ್ರೀ ಉಮಾಮಹೇಶ್ವರ ಯುವಕ ಮಂಡಲ ಬಳಂಜ ಇದರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳದ ಕಾರ್ಯಕ್ರಮದ ಉದ್ಘಾಟನೆ ಇಂದು (ಜ.18) ರಂದು ಬಳಂಜ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು.


ವೇದಿಕೆಯಲ್ಲಿ ದ.ಕ.ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾ.ಪಂ ಸದಸ್ಯೆ ವಿನೂಷ ಪ್ರಕಾಶ್, ಬಳಂಜ ಗ್ರಾ,ಪಂ ಅಧ್ಯಕ್ಷೆ ದೇವಕಿ ಕೊರಗಪ್ಪ ನಾಯ್ಕ, ಬಳಂಜ ಗ್ರಾ,ಪಂ ಸದಸ್ಯ ಯಶೋಧರ ಶೆಟ್ಟಿ, ಮಂಗಳಾ ದೇವಾಡಿಗ, ರೇವತಿ, ಚಂದ್ರಶೇಖರ್ ಪಿ.ಕೆ, ಜಿ.ಪಂ ಸದಸ್ಯೆ ಸೌಮ್ಯಲತಾ, ನಮಿತಾ, ಎ.ಪಿ.ಎಮ್.ಸಿ ಅಧ್ಯಕ್ಷ ಕೇಶವ ಗೌಡ, ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ಯುವ ಸಬಲೀಕರಣ ಉಪನಿರ್ದೇಶಕ ಪ್ರಭಾಕರ್ ನಾರಾವಿ, ಪ್ರಭಾಕರ್ ನಾರಾವಿ, ಸೂಡಿ ಮುಳ್ಳು ಜಿಲ್ಲಾ ಅಧ್ಯಕ್ಷ ರಾಜ್ಯ ಪ್ರದಾನ ಕಾರ್ಯದರ್ಶಿ ಸುರೇಶ್ ರೈ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಇ ಜಯರಾಂ, ತಾಲೂಕು ಯುವ ಜನ ಒಕ್ಕೂಟ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಸಂತೋಷ್ ಕುಮಾರ್ ಕಾಪಿನಡ್ಕ, ವಿನು ಬಳಂಜ, ಸಂತೋಷ್ ಪಿ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.