ಫೆ.2: 10ನೇ ವರ್ಷದ ಕೋಟಿ-ಚೆನ್ನಯ್ಯ ಕ್ರೀಡಾಕೂಟ ಜ.26 ಕ್ರಿಕೆಟ್ ಪಂದ್ಯಾಟ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿಕ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮಹಿಳಾ ಬಿಲ್ಲವ ವೇದಿಕೆ, ಯುವವಾಹಿನಿ ಬೆಳ್ತಂಗಡಿ ಮತ್ತು ವೇಣೂರು ಘಟಕದ ಸಹಯೋಗದೊಂದಿಗೆ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ನೇತೃತ್ವದಲ್ಲಿ 10ನೇ ವರ್ಷದ ಕೋಟಿ-ಚೆನ್ನಯ್ಯ ಕ್ರೀಡಾಕೂಟ ಫೆ.2 ರಂದು ಬೆಳ್ತಂಗಡಿ ಸರಕಾರಿ ಪದವಿಪೂರ್ವ (ಜೂನಿಯರ್ ಕಾಲೇಜು) ಕಾಲೇಜು ಕ್ರೀಡಾಂಗಣದಲ್ಲಿ ಮತ್ತು ಜ.26ರಂದು ಕ್ರಿಕೆಟ್ ಪಂದ್ಯಾಟ ಜರಗಲಿದೆ ಎಂದು ಶ್ರೀ ಗುರುನಾರಾಯಣ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಮತ್ತು ಕ್ರೀಡಾಕೂಟ ಪ್ರಧಾನ ಸಂಚಾಲಕ ಡಿ.ಜಗದೀಶ ಹೇಳಿದರು. ಅವರು ಜ.18ರಂದು ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಮಾಜ ಭಾಂದವರನ್ನು ಒಗ್ಗೂಡಿಸುವುದಕ್ಕಾಗಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು ಈ ಕ್ರೀಡಾಕೂಟದಲ್ಲಿ ತಾಲೂಕಿನ ಪ್ರತಿ ಗ್ರಾಮಗಳಿಂದ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಮಂಗಳೂರು ಮೂಡ ಮಾಜಿ ಅಧ್ಯಕ್ಷ ತಜೋಮಯ ಕ್ರೀಡಾಕೂಟ ಉದ್ಘಾಟಿಸಲಿದ್ದು ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಉದ್ಯಮಿ ರಮಾನಂದ ಸಾಲಿಯಾನ್, ಲೋಕೋಪಯೋಗಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಗುರುಪ್ರಸಾದ್, ಉಪ್ಪಿನಂಗಡಿಯ ದಂತ ವೈದ್ಯ ಡಾ| ರಾಜರಾಮ್, ಮಂಗಳುರು ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ರಾಕೇಶ್ ಟಿ ಬಂಗೇರ ಭಾಗವಹಿಸಲಿದ್ದಾರೆ.
ಸಂಜೆ ನಡೆಯವ ಸಮಾರೋಪ ಸಮಾರಂಭದಲ್ಲಿ ಮಾಜಿ ಶಾಸಕ ಹಾಗೂ ಸಂಘದ ಗೌರವಾಧ್ಯಕ್ಷ ಕೆ. ವಸಂತ ಬಂಗೇರ ಬಹುಮಾನ ವಹಿಸಲಿದ್ದಾರೆ. ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ, ಬಿಜೆಪಿ ತಾಲೂಕು ಅಧ್ಯಕ್ಷ ಜಯಂತ್ ಕೋಟ್ಯಾನ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಸಿವೇ ಶಿಪ್ಪಿಂಗ್ ಜನರಲ್ ಮೆನೇಜರ್ ಪ್ರವೀಣ್ ಕುಮಾರ್ ಬಂಗೇರ, ನಿವೃತ್ತ ಸೈನಿಕ ಎ.ಕೆ ಶಿವನ್, ಸಂಘದ ಮಾಜಿ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ.

ಕ್ರೀಡಾಕೂಟಕ್ಕೆ ಗುರುದೇವ ವಿವಿದೊದ್ದೇಶ ಸಹಕಾರಿ ಸಂಘ, ಶ್ರೀ ಗುರುದೇವ ಕಾಲೇಜು, ಸಂಘದ ಗ್ರಾಮ ಸಮಿತಿಗಳ ಸಹಕಾರದಿಂದ ನಡೆಯಲಿದೆ.
ಕ್ರೀಡಾಕೂಟ ಸಮಯಕ್ಕೆ ಸರಿಯಾಗಿ ಪ್ರಾರಂಭವಾಗಲಿರುವುದರಿಂದ ಎಲ್ಲರೂ ಸೂಕ್ತ ಸಮಯದಲ್ಲಿ ಭಾಗವಹಿಸಬೇಕು ಎಂದರು. ಪತ್ರಿಕಾ ಗೋಷ್ಟಿಯಲ್ಲಿ ಸಂಘದ ಉಪಾಧ್ಯಕ್ಷ ಮನೋಹರ್ ಇಳಂತಿಲ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಂಜಿತ್ ಹೆಚ್.ಡಿ, ಸಂಘದ ನಿರ್ದೇಶಕರುಗಳಾದ ಉಮೇಶ್ ಕುಮಾರ್ ಬೆಳ್ತಂಗಡಿ, ಜಯಕುಮಾರ್ ನಡ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.