ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ (ನಿ) ಉದ್ಘಾಟನೆ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಇದರ ಉದ್ಘಾಟನಾ ಸಮಾರಂಭ ಜ.25 ರಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಮ್.ಎನ್ ರಾಜೇಂದ್ರ ಕುಮಾರ್ ನೆರವೇರಿಸಿದರು. ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯ, ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಅಧ್ಯಕ್ಷ ಹರೀಶ್ ಕುಮಾರ್ ವಹಿಸಿದ್ದರು. ಮಾಜಿ ಸಚಿವ ರಮಾನಾಥ ರೈ ನಿರಖು ಠೇವಣಿ ಪತ್ರ ಬಿಡುಗಡೆಗೊಳಿಸಿ, ಗಣಕಯಂತ್ರ ಉದ್ಘಾಟನೆಯನ್ನು ಬೆಳ್ತಂಗಡಿ ಧರ್ಮಗುರು ಚರ್ಚ್ ರೆ.ಫಾ. ಬೊನವೆಂಚರ್ ನಝ್ರೆತ್ ಗಣಕಯಂತ್ರದ ಉದ್ಘಾಟನೆಯನ್ನು ನೆರವೇರಿಸಿದರು. ಪಾಲು ಬಂಡವಾಳ ಪತ್ರ ಬಿಡುಗಡೆಯನ್ನು ಉದ್ಯಮಿ ಕೆ.ರಮಾನಂದ ಸಾಲಿಯಾನ್ ನೆರವೇರಿಸಿದರು.


ಮುಖ್ಯ ಅತಿಥಿಗಳಾಗಿ ನಿರಂಜನ್ ಬಾವಂತಬೆಟ್ಟು ನಿರ್ದೇಶಕರು, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್, ಮಂಗಳೂರು, ಗುರುನಾರಾಯಣ ಸ್ವಾಮಿ ಸೇವಾ ಸಂಘ ಅಧ್ಯಕ್ಷ ಪದ್ಮನಾಭ ಮಾಣಿಂಜ, ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ ಸೋಮೇಗೌಡ, ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಗಂಗಾಧರ ಮಿತ್ತಮಾರು, ಬೆಳ್ತಂಗಡಿ ತಾ. ಬಂಟರ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ, ಜಿ.ಪಂ ಸದಸ್ಯರುಗಳಾದ ಶಾಹುಲ್ ಹಮೀದ್, ಧರಣೇಂದ್ರ ಕುಮಾರ್, ಉಪಸ್ಥಿತರಿದ್ದರು. ಆಡಳಿತ ಮಂಡಳಿ ಎಲ್ಲಾ ನಿರ್ದೇಶಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.