ಫೆ 9 : ಯುವವಾಹಿನಿ ವತಿಯಿಂದ ಕೆಸರ್‌ ಕಂಡೊದ ಗೊಬ್ಬುದ ಪಂಥ

ಬೆಳ್ತಂಗಡಿ : ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ, ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಬಲೆ ಗೊಬ್ಬುಗ ” ಕೆಸರ್ ಕಂಡೊಡು ಗೊಬ್ಬುದ ಪಂಥ” ಕಾರ್ಯಕ್ರಮವು ಫೆ.9 ರಂದು ಬೆಳ್ತಂಗಡಿಯ ಎಪಿಎಂಸಿ ಬಳಿ ಇರುವ ನಡಿಗುತ್ತು ಗದ್ದೆಯಲ್ಲಿ ನಡೆಯಲಿದೆ ಎಂದು ಮಂಗಳೂರು ಕೇಂದ್ರ ಸಮಿತಿಯ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ಹೇಳಿದರು. ಅವರು ಜ.3೦ ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಒಂದಾದ ಈ ಕ್ರೀಡೆಯಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆ ಹಾಗೂ ಮೂಡಿಗೆರೆ, ಬೆಂಗಳೂರು ಯುವವಾಹಿನಿ ಸದಸ್ಯರು ಕ್ರೀಡೆಯಲ್ಲಿ ಸ್ಪರ್ಧಿಸಲಿದ್ದಾರೆ. ಬೆಳ್ತಂಗಡಿ ತಾಲೂಕಿನ ಬಿಲ್ಲವ ಸಮಾಜದ ಪುರುಷರಿಗೆ ಮುಕ್ತ ಹಗ್ಗ ಜಗ್ಗಾಟ ಮತ್ತು ಕಬಡ್ಡಿ, ಮಹಿಳೆಯರಿಗೆ ಮುಕ್ತ ಹಗ್ಗ ಜಗ್ಗಾಟ ಮತ್ತು ತ್ರೋಬಾಲ್ ಸ್ಫರ್ಧೆ ನಡೆಯಲಿದೆ.

35 ತಂಡಗಳು ಸ್ಪರ್ಧಿಯಲ್ಲಿ ಭಾಗವಹಿಸಿ ಬೆಳಿಗ್ಗೆ 8.00 ಗಂಟೆಯಿಂದ ಸಂಜೆ 5.00 ರವರೆಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಪುರುಷರಿಗೆ ಮತ್ತು ಮಹಿಳೆಯರಿಗೆ ಕೆಸರು ಗದ್ದೆಯಲ್ಲಿ 50 ಮೀ ಓಟ, ಉಪ್ಪು ಮೂಟೆ, 5 ಕಾಲಿನ ಓಟ, ಹಾಳೆ ಓಟ, ಕಬಡ್ಡಿ, ಹಗ್ಗ ಜಗ್ಗಾಟ ಮತ್ತು ತ್ರೋಬಾಲ್ ಸ್ಪರ್ಧೆ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರುಗಳಿಗೆ, ಘಟಕದ ಅಧ್ಯಕ್ಷರುಗಳಿಗೆ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ.

ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ಪದ್ಮನಾಭ ಮಾಣಿಂಜ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಕೆ.ವಸಂತ ಬಂಗೇರ, ಹಾಗೂ ಕೆ.ಪ್ರಭಾಕರ ಬಂಗೇರ, ಮೂಡಬಿದ್ರೆ ಶಾಸಕ ಉಮನಾಥ ಕೋಟ್ಯಾನ್, ಕಾರ್ಕಳ ಶಾಸಕ ಸುನಿಲ್ ಕುಮಾರ್, ಎಪಿಎಂಸಿ ಅಧ್ಯಕ್ಷರಾದ ಕೇಶವ ಪಿ. ಬೆಳಾಲು ಚಲನಚಿತ್ರ ನಟರಾದ ಅರವಿಂದ ಬೋಳಾರ್, ಬೋಜರಾಜ ವಾಮಂಜೂರು, ಹಲವು ಕಿರುತೆರೆಯ ನಟರು ಮುಂತಾದವರು ಬೆಳ್ತಂಗಡಿ ತಾಲೂಕಿನ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
‘ಬಲೆ ಗೊಬ್ಬುಗ’ ಪತ್ರಿಕಾಗೋಷ್ಠಿಯಲ್ಲಿ ಕೆಸರ್ ಕಂಡೊಡು ಗೊಬ್ಬುದ ಪಂಥ ಈ ಕ್ರೀಡಾಕೂಟದ ಪ್ರಧಾನ ಸಂಚಾಲಕರಾಗಿ ಪ್ರಶಾಂತ್ ‘ಪ್ರತಿಮಾ’, ಕೇಂದ್ರ ಸಮಿತಿಯ ಆರೋಗ್ಯ ಮತ್ತು ಕ್ರೀಡಾ ನಿರ್ದೇಶಕರಾದ ಪ್ರಶಾಂತ್ ಮಚ್ಚಿನ ಮತ್ತು ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಹರೀಶ್ ಸುವರ್ಣ ಗೌರವಸಲಹೆಗಾರ ರಮಾನಂದ ಸಾಲಿಯಾನ್, ಮಹಿಳಾ ಸಂಚಾಲನಾ ಸಮಿತಿಯ ಪ್ರಧಾನ ಸಂಚಾಲಕರಾದ ಸುಜಾತ ಅಣ್ಣಿ ಪೂಜಾರಿ, ಆರೋಗ್ಯ ಮತ್ತು ಕ್ರೀಡಾ ನೀರ್ದೇಶಕ ದೇವಿಪ್ರಸಾದ್ ಬರಮೇಲು ,ನಿಕಟಪೂರ್ವ ಅಧ್ಯಕ್ಷ ಸದಾನಂದ ಉಂಗಿಲಬೈಲು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.