ತೆಂಕಕಾರದೂರು : ಶ್ರೀ ವಿಷ್ಣುಮೂರ್ತಿ ದೇವರ ಜಾತ್ರಾ ಮಹೋತ್ಸವ ಧಾರ್ಮಿಕ ಸಭೆ

ತೆಂಕಕಾರದೂರು : ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರ ಮಹೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಹಾಗೂ ಸನ್ಮಾನ ಕಾರ್ಯಕ್ರಮವು ಜ.೩೦ ರಂದು ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ರಾಜೋತ್ಸವ ಪ್ರಶಸ್ತಿಗೆ ಭಾಜನರಾದ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಧ್ಯಕ್ಷ ಕೆ. ವಸಂತ ಸಾಲಿಯಾನ್ ಮತ್ತು ಜಲಜ ದಂಪತಿಗಳನ್ನು ಗ್ರಾಮಸ್ಥರ ಪರವಾಗಿ ಜಾತ್ರೋತ್ಸವದ ವೇದಿಕೆಯಲ್ಲಿ ಸನ್ಮಾನಿಸಲಾಯಿತು ಹಾಗೂ ದೇವಸ್ಥಾನಕ್ಕೆ ವಿಶೇಷ ಸೇವೆ ನೀಡಿದ ಅಂಗಡಿಬೆಟ್ಟು ಮಾಯಿಲಪ್ಪ ಪೂಜಾರಿ ದಂಪತಿಗಳನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರ ಕೆ.ಕೃಷ್ಣ ಸಂಪಿಗೆತ್ತಾಯ, ಕಹಳೆ ನ್ಯೂಸ್ ಮುಖ್ಯಸ್ಥ ಶ್ಯಾಮ್ ಸುದರ್ಶನ್, ಮಂಗಳೂರು ಎಸ್.ಕೆ.ಡಿ.ಆರ್.ಡಿ.ಪಿ ನಿರ್ದೇಶಕ ಸತೀಶ್ ಶೆಟ್ಟಿ ಅಲಿಮಾರ್, ತೆಂಕಕಾರಂದೂರು, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಕುಮಾರ್ ನಡಕ್ಕರ, ಸಾಹಿತಿ ಪ.ರಾ.ಶಾಸ್ತ್ರಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಕಾಪಿನಡ್ಕ , ಶ್ರೀವಿಷ್ಣುಮೂರ್ತಿ ಭಜನಾ ಮಂಡಳಿ ಅಧ್ಯಕ್ಷ ಅಶ್ವಥ್, ಜಾತ್ರೋತ್ಸವ ಸಮಿತಿ ಮಾಜಿ ಅಧ್ಯಕ್ಷ ಸಂತೋಷ್ ಹೆಗ್ಡೆ ಮಾರುತಿ ನಿಲಯ, ಶಿಕ್ಷಕ ದೇವುದಾಸ್ ನಾಯಕ್ ಉಪಸ್ಥಿತರಿದ್ದರು. ಬಳಿಕ ಯಕ್ಷ-ಗಾನ-ನಾಟ್ಯ-ಹಾಸ್ಯ-ವೈಭವ ಮನೋರಂಜನಾ ಕಾರ್ಯಕ್ರಮ ಜರುಗಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.