ಬಿಲ್ಲವ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ಬೆಳ್ತಂಗಡಿ : ‘ರಾಜಕೀಯವಾಗಿ ಛಿದ್ರವಾಗಿದ್ದ ಬಿಲ್ಲವರು ಇಂದು ಕ್ರೀಡೆ ಮತ್ತು ನಾರಾಯಣ ಗುರು ಜಯಂತಿಯ ಮೂಲಕ ಒಂದಾಗುತ್ತಿರುವುದು ಆಶಾದಾಯಕವಾದ ಬೆಳವಣಿಗೆಯಾಗಿದೆ. ಕ್ರೀಡೆಯಂತಹ ಅವಕಾಶಗಳು ಬಿಲ್ಲವ ಸಮಾಜಕ್ಕೆ ಸಾಧನೆಗೆ ಮಾರ್ಗವಾಗುವುದರ ಜೊತೆಗೆ ತಮ್ಮ ಜಾಗೃತಿಗೆ ವೇದಿಕೆಯಾಗಲಿ’ ಎಂದು ಬೆಳ್ತಂಗಡಿ ಮಂಜುಶ್ರೀ ಜೇಸಿಐ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ ಹೇಳಿದರು.
ಅವರು ಜ.26 ರಂದು ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮಹಿಳಾ ಬಿಲ್ಲವ ವೇದಿಕೆ ಬೆಳ್ತಂಗಡಿ, ಯುವವಾಹಿನಿ ಬೆಳ್ತಂಗಡಿ ಘಟಕ ಮತ್ತು ಯುವವಾಹಿನಿ ವೇಣೂರು ಘಟಕ ಇವರ ಸಹಯೋಗದೊಂದಿಗೆ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕೋಟಿ-ಚೆನ್ನೆಯ ಕ್ರೀಡಾಕೂಟದ ಅಂಗವಾಗಿ ತಾಲೂಕಿನ ಬಿಲ್ಲವ ಸಮಾಜ ಬಾಂಧವರಿಗಾಗಿ ನಡೆದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಂಜಿತ್ ಹೆಚ್.ಡಿ ವಹಿಸಿದ್ದರು.
ವೇದಿಕೆಯಲ್ಲಿದ್ದ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ, ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರಿ ಸಂಘದ ನಿರ್ದೇಶಕ ಹೆಚ್.ಧರ್ಣಪ್ಪ ಪೂಜಾರಿ, ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಉಪ್ಪಾರ್ ಶುಭ ಹಾರೈಸಿದರು.
ಕೋಟಿ ಚೆನ್ನಯ ಕ್ರೀಡಾಕೂಟದ ಪ್ರಧಾನ ಸಂಚಾಲಕ ಜಗಧೀಶ್ ಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅವಿನಾಶ್ ಬಳಂಜ ಕಾರ್ಯಕ್ರಮ ನಿರೂಪಿಸಿದರು. ಯುವ ಬಿಲ್ಲವ ವೇದಿಕೆ ಕಾರ್ಯದರ್ಶಿ ರೂಪೇಶ್ ಪೂಜಾರಿ ಧರ್ಮಸ್ಥಳ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.