ಬೆಳ್ತಂಗಡಿ : ಕೋಟಿಚೆನ್ನಯ ಕ್ರೀಡಾಕೂಟದ ಸಮಾರೋಪ ಸಮಾರಂಭ

Advt_NewsUnder_1
Advt_NewsUnder_1

ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಮಹಿಳಾ ಬಿಲ್ಲವ ವೇದಿಕೆ ಬೆಳ್ತಂಗಡಿ, ಯುವವಾಹಿನಿ ಬೆಳ್ತಂಗಡಿ ಹಾಗೂ ವೇಣೂರು ಘಟಕದ ಸಹಭಾಗಿತ್ವದಲ್ಲಿ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇವರ ನೇತೃತ್ವದಲ್ಲಿ 10ನೇ ವರ್ಷದ ಕೋಟಿ-ಚೆನ್ನಯ ಕ್ರೀಡಾಕೂಟದ ಸಮಾರೋಪ ಸಮಾರಂಭವು ಫೆ-2ರಂದು ಸ.ಪ.ಪೂ.ಕಾಲೇಜು ಕ್ರೀಡಾಂಗಣ ಬೆಳ್ತಂಗಡಿಯಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ ವಹಿಸಿದರು. ಗೌರವಧ್ಯಕ್ಷ ಮಾಜಿ ಶಾಸಕ ಕೆ. ವಸಂತ ಬಂಗೇರ ಬಹುಮಾನ ವಿತರಿಸಿದರು.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಪ್ರಭಾಕರ ಬಂಗೇರ, ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್, ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಮಂಗಳೂರು ಸಿಪಿಂಗ್ ಜನರಲ್ ಮ್ಯಾನೇಜರ್ ಪ್ರವೀಣ್ ಕುಮಾರ್ ಬಂಗೇರ, ಕೆ. ವಸಂತ ಸಾಲಿಯನ್ ಕಾಫಿನಡ್ಕ, ಪೀತಾಂಬರ ಹೇರಾಜೆ ಬೆಳ್ತಂಗಡಿ, ಜಯರಾಮ ಬಂಗೇರ ಹೇರಾಜೆ, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅದ್ಯಕ್ಷ ರಂಜಿತ್ ಹೆಚ್.ಡಿ ಬಳಂಜ, ಸಂಘದ ಉಪಧ್ಯಕ್ಷ ಮನೋಹರ ಇಳಂತಿಲ, ಪ್ರಧಾನ ಸಂಚಾಲಕ ಜಗದೀಶ್, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರೀಶ್ ಕನ್ಯಾಡಿ ಹಾಗೂ ಸಂಘದ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆಯ ನಿರ್ದೇಶಕರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರನ್ನು ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.