HomePage_Banner_
HomePage_Banner_

ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ – ಕೇಂದ್ರ ಸರಕಾರ

ಬೆಳ್ತಂಗಡಿ: ಫೇಸ್‌ಬುಕ್, ವಾಟ್ಸಪ್, ಟ್ವಿಟ್ಟರ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿಗಳನ್ನು ಹರಡಿಸುವುದನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಸರಕಾರ ಹೇಳಿದೆ. ಈ ಮೂಲಕ ಸೋಶಿಯಲ್ ಮೀಡಿಯಾಗಳನ್ನು ಅಪಪ್ರಚಾರ, ತೇಜೋವಧೆ ಮಾಡಲು ಬಳಕೆ ಮಾಡುತ್ತಿರುವವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಿಸಿ ಮುಟ್ಟಿಸಿದೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್‌ರವರು ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹಬ್ಬಿಸಿ ಆತಂಕ ಸೃಷ್ಟಿಸುವುದು ಹಾಗೂ ಅಶ್ಲೀಲ ಚಿತ್ರ ಮತ್ತು ದೃಶ್ಯ ಪ್ರಸಾರದ ಮೂಲಕ ಸಮಾಜದ ಸ್ವಾಸ್ಥ್ಯ ಹಾಳುಗೆಡಹುವ ಪ್ರಯತ್ನಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಸರಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಆದರೆ ಸಾಮಾಜಿಕ ಜಾಲತಾಣಿಗರ ಖಾತೆಗಳಿಗೆ ಅವರ ಆಧಾರ್ ಸಂಖ್ಯೆ ಜೋಡಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡುತ್ತಿರುವವರ ಮೇಲೆ ನಿಗಾ ಇಡುವುದಲ್ಲದೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಈಗಾಗಲೇ ಸರಕಾರ ನ್ಯಾಯಾಲಯಕ್ಕೆ ತಿಳಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.