ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳು ಸರಕಾರಿ ಪ್ರೌಢಶಾಲೆ ನಡ ಇಲ್ಲಿಯ ಪ್ರಯೋಗಾಲಯಕ್ಕೆ ಭೇಟಿ

Advt_NewsUnder_1
Advt_NewsUnder_1

ಬೆಳ್ತಂಗಡಿ: ಜ.20 ರಂದು ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಳೆಕೋಟೆ ಬೆಳ್ತಂಗಡಿಯ 9 ನೇ ತರಗತಿಯ ವಿದ್ಯಾರ್ಥಿಗಳು ಸರಕಾರಿ ಪ್ರೌಢಶಾಲೆ ನಡ ಇಲ್ಲಿಯ ಗಣಿತ ಹಾಗೂ ಹಿಂದಿ ಪ್ರಯೋಗಾಲಯಕ್ಕೆ ಭೇಟಿ ನೀಡಿದರು. ಗಣಿತ ವಿಷಯಕ್ಕೆ ಸಂಬಂಧಿಸಿದ ಹಲವಾರು ಕ್ಲಿಷ್ಟಕರ ಅಂಶಗಳನ್ನು ಸರಳ ಮಾದರಿಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರಯೋಗಾಲಯದ ರೂವಾರಿ, ಗಣಿತ ಶಿಕ್ಷಕರಾದ ಯಾಕೂಬ್ ನಡ ಇವರು ಮನದಟ್ಟು ಮಾಡಿದರು. ಪ್ರೌಢ ಶಾಲಾ ಹಿಂದಿ ಶಿಕ್ಷಕರಾದ ಮೋಹನ್ ಬಾಬು, ನಡ ಇವರು ರಾಷ್ಟ್ರಭಾಷೆಯ ಬಗ್ಗೆ ಅರಿವು ಮೂಡಿಸಿದರು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶರ್ಮಿಳ ಇವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.