ಜಿಲ್ಲಾ ಯುವವಾಹಿನಿ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ಬಲೆಗೊಬ್ಬುಗ ಕೆಸರ್‌ದ ಗೊಬ್ಬು

Advt_NewsUnder_1
Advt_NewsUnder_1

ಬೆಳ್ತಂಗಡಿ: ಜಿಲ್ಲಾ ಯುವ ವಾಹಿನಿ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ಬಲೆ ಗೊಬ್ಬುಲೆ ಕೆಸರ್ ದ ಗೊಬ್ಬು ಕಾರ್ಯಕ್ರಮವನ್ನು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ, ನಿವೃತ ಉನ್ನತ ಅರಣ್ಯ ಅಧಿಕಾರಿ ಪದ್ಮನಾಭ ಮಾಣಿಂಜ ಉದ್ಘಾಟಿಸಿದರು.
ಫೆ.9 ರಂದು ಬೆಳ್ತಂಗಡಿ ಎಪಿಎಂಸಿ ಪಕ್ಕದ ಕೃಷಿ ತೋಟದಲ್ಲಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಆಶ್ರಯದಲ್ಲಿ, ಬೆಳ್ತಂಗಡಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ “ಬಲೆ ಗೊಬ್ಬುಗ- ಕೆಸರ್ ಕಂಡೊಡು ಗೊಬ್ಬುದ ಪಂಥೊ” ಕಾರ್ಯಕ್ರಮ ಆಯೋಜನೆಗೊಂಡಿತ್ತು.
ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಹರೀಶ್ ಕನ್ಯಾಡಿ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ. ಪೀತಾಂಬರ ಹೇರಾಜೆ, ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಜಯಂತ ನಡುಬೈಲು, ಕೇಂದ್ರ ಸಮಿತಿ ಉಪಾಧ್ಯಕ್ಷ ಡಾ. ರಾಜಾರಾಮ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆಂತ್ಯಾರು, ತಾ.ಪಂ ಸದಸ್ಯ ಸುಧೀರ್ ಆರ್ ಸುವರ್ಣ, ನಗರ ಪಂಚಾಯಿತಿ ಸದಸ್ಯೆ ತುಳಸಿ ಕರುಣಾಕಾರ, ಬೆಳ್ತಂಗಡಿ ಪತ್ರಕರ್ತರ ಸಂಘದ ಕಾರ್ಯದರ್ಶಿ ಮನೋಹರ್ ಬಳಂಜ, ಎಸ್.ಡಿ.ಸಿ.ಸಿ ಮಂಗಳೂರು ಇದರ ಇನ್ಸ್‌ಪೆಕ್ಟರ್ ಮಾಲಾ, ಬೆಳಾಲು ಗ್ರಾ. ಪಂ. ಅಧ್ಯಕ್ಷ ದಿನೇಶ್ ಕೋಟ್ಯಾನ್, ಪೆರಿಂಜೆ ಮಿಲ್ಕ್ ಸೊಸೈಟಿ ನಿರ್ದೇಶಕ ವಿಠಲ ಸಿ ಪೂಜಾರಿ, ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶಾಂತಾ ಬಂಗೇರ, ಎಪಿಎಂಸಿ ಸದಸ್ಯೆ ಪಲ್ಲವಿರಾಜು, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಪ್ರದೀಪ್, ಆರೋಗ್ಯ ಮತ್ತು ಕ್ರೀಡಾ ನಿರ್ದೇಶಕ ಪ್ರಶಾಂತ ಮಚ್ಚಿನ, ಸಂಘಟನಾ ಕಾರ್ಯದರ್ಶಿ ರಾಜೇಶ್ ಬಾಬನಕಟ್ಟೆ, ಬೆಳ್ತಂಗಡಿ ಘಟಕದ ಕ್ರೀಡಾಕೂಟ ಸಮಿತಿಯ ಪ್ರಧಾನ ಸಂಚಾಲಕ ಪ್ರಶಾಂತ್ ಎಂ, ಸ್ವಾಗತ ಸಮಿತಿ ಅಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ, ಆರೋಗ್ಯ ಮತ್ತು ಕ್ರೀಡಾ ನಿರ್ದೇಶಕ ದೇವಿಪ್ರಸಾದ್ ಬರಮೇಲು ಉಪಸ್ಥಿತರಿದ್ದರು.
ಕೇಂದ್ರ ಸಮಿತಿ ಅಧ್ಯಕ್ಷ ನರೇಶ್ ಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬೆಳ್ತಂಗಡಿ ಘಟಕದ ಕಾರ್ಯದರ್ಶಿ ವಿಜಯ ಕುಮಾರ್ ವಂದಿಸಿದರು. ಚಂದ್ರಹಾಸ ಬಳಂಜ ಮತ್ತು ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಸಂತ ಸಾಲಿಯಾನ್ ಕಾಪಿನಡ್ಕ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾಗಿ ನೇಮಕವಾದ ರಾಜು ನಾಯ್ಕ ಮತ್ತು ಬೆಳ್ತಂಗಡಿ ಎಪಿಎಂಸಿ ಅಧ್ಯಕ್ಷ ಕೇಶವ ಪಿ ಬೆಳಾಲು ಇವರನ್ನು ಸನ್ಮಾನಿಸಲಾಯಿತು. ತುಳು ಚಲನಚಿತ್ರ ನಟ ಬೋಜರಾಜ ವಾಮಂಜೂರು, ನಟಿ ನವ್ಯಾ ಪೂಜಾರಿ ವಿಶೇಷ ಅತಿಥಿಗಳಾಗಿ ಭಾಗಿಯಾಗಿ ಸ್ಪೂರ್ತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.