ವ್ಯಸನಮುಕ್ತ ಸಾಧಕರ ಸಮಾವೇಶ ಮತ್ತು ಶತದಿನೋತ್ಸವ ಕಾರ್ಯಕ್ರಮ

Advt_NewsUnder_1
Advt_NewsUnder_1

ಧರ್ಮಸ್ಥಳ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಧರ್ಮಸ್ಥಳ ಇದರ ವತಿಯಿಂದ ರಾಜ್ಯಾದ್ಯಂತ ನಡೆಸಲಾದ ಮಧ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ದುಶ್ಚಟಮುಕ್ತರಾಗಿ ನವ ಜೀವನ ನಡೆಸುತ್ತಿರುವ ವ್ಯಸನಮುಕ್ತ ಸಾಧಕರ ಸಮಾವೇಶ ಮತ್ತು ಶತದಿನೋತ್ಸವ ಕಾರ್ಯಕ್ರಮ ಫೆ.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅನ್ನಾಸಾಹೇಬ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಕೆ ರೋಹಿಣಿ, ಶ್ರೀ.ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಲ್.ಹೆಚ್ ಮಂಜುನಾಥ್, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷೆ ಶಾರದ ಆರ್ ರೈ, ನಿರ್ದೇಶಕ ವಿವೇಕ್ ಪಾಸ್, ರಾಜ್ಯಾಧ್ಯಕ್ಷ ವಿ ರಾಮಸ್ವಾಮಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ ವಸಂತ ಸಾಲ್ಯಾನ್ ಇವರನ್ನು ಸನ್ಮಾನಿಸಲಾಯಿತು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.