HomePage_Banner_
HomePage_Banner_
HomePage_Banner_

ಮರೋಡಿ: ಜಾತ್ರಾ ಮಹೋತ್ಸವ, ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ

Advt_NewsUnder_1

* ದೇವರ ಆರಾಧನೆಯಿಂದ ಜೀವನದಲ್ಲಿ ಉನ್ನತಿ : ಸತೀಶ್ ಶೆಟ್ಟಿ

ಮರೋಡಿ: ನಮ್ಮ ಊರಿಗೆ ಬರುವ ಕಷ್ಟಕಾರ್ಪಣ್ಯಗಳು ದೂರವಾಗಬೇಕಾದರೆ ಭಜನೆ, ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಮಾಡಬೇಕು, ಸಾಮೂಹಿಕವಾಗಿ ದೇವರ ಆರಾಧನೆ, ಸ್ಮರಣೆ ಮಾಡುವುದರಿಂದ ಭಗವಂತನು ಭಕ್ತಿಗೆ ಒಳಿದು ನಾವು ಜೀವನದಲ್ಲಿ ಉನ್ನತಿ ಹೊಂದಲು ಸಾಧ್ಯವಿದೆ. ಎಂದು ಶ್ರೀ ಕ್ಷೆ. ಧ. ಗ್ರಾ. ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು.
ಅವರು ಫೆ೧೧ ರಂದು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ. ಕ್ಷೆ. ಧ. ಗ್ರಾ. ಯೋಜನೆ ನಾರಾವಿ ವಿಭಾಗ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಮರೋಡಿ, ಶ್ರೀ ಉಮಾಮಹೇಶ್ವರ ದೇವಸ್ಥಾನ ಮರೋಡಿ ಹಾಗೂ ಸ್ಥಳೀಯ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ಜರುಗಿದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಉಮಾಮಹೇಶ್ವರ ದೇವಸ್ಥಾನ ಮರೋಡಿಯ ಆಡಳಿತ ಮೋಕ್ತೇಶರ ಶ್ರೀ ದೇವೆಂದ್ರ ಹೆಗ್ಡೆ ಕೊಕ್ರಾಡಿ ವಹಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ದಿ ಯೋಜನೆಯನ್ನು ಹುಟ್ಟುಹಾಕಿ ಇಡೀ ಸಮಾಜವನ್ನು ಅಭಿವೃದ್ಧಿಗೊಳಿಸಿದ್ದಾರೆ. ದೇವಸ್ಥಾನದ ಅಭಿವೃದ್ಧಿಯಿಂದ ಊರು ಸುಭಿಕ್ಷೆಯಾಗಿ ನಾವೆಲ್ಲರೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ. ಜೊತೆಗೆ ಈ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆದು ದೇವಸ್ಥಾನದಲ್ಲಿ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಊರಿನ ಎಲ್ಲ ಬಂಧುಗಳು ಸಹಕಾರವನ್ನು ನೀಡಬೇಕು ಎಂದರು.
ಮುಖ್ಯ ಅತಿಥಿ ನೆಲೆಯಲ್ಲಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಜಯಂತ್ ಕೋಟ್ಯಾನ್ ಮಾತನಾಡಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಮಾಡುವುದರಿಂದ ಗ್ರಾಮೀಣ ಅಭಿವೃದ್ಧಿಯ ಮುಖಾಂತರ ಎಲ್ಲರನ್ನು ಒಗ್ಗೂಡಿಸಲು ಸಾಧ್ಯವಿದೆ ಎಂದರು.
ವೇದಿಕೆಯಲ್ಲಿ ಪೂಜಾ ಸಮಿತಿ ಅಧ್ಯಕ್ಷ ಆನಂದ ಶೆಟ್ಟಿ, ಸೇವಾ ಪ್ರತಿನಿಧಿಗಳಾದ ಹರಿಣಾಕ್ಷಿ, ಸುಜಾತ, ಒಕ್ಕೂಟದ ಉಪಾಧ್ಯಕ್ಷೆ ಲೋಲಾಕ್ಷಿ, ದೇವಸ್ಥಾನದ ಮೋಕ್ತಶರಾದ ವಿಜಯ ಅರಿಗ ಉಪಸ್ಥಿತರಿದ್ದರು.
ಯೋಜನೆಯ ನಾರಾವಿ ವಲಯ ವಲಯಾಧ್ಯಕ್ಷ ಯಶೋಧರ ಬಂಗೇರ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿ, ಮೇಲ್ವಿಚಾರಕ ಗೀರಿಶ್ ಕುಮಾರ್ ನಿರೂಪಿಸಿ, ಒಕ್ಕೂಟದ ಅಧ್ಯಕ್ಷ ಶುಭರಾಜ ಹೆಗ್ಡೆ ವಂದಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.