ಇಂದಬೆಟ್ಟು: ಪಾಲೆದಬೆಟ್ಟು ಎಂಬಲ್ಲಿ ಅಪೆ ರಿಕ್ಷಾ ಪಲ್ಟಿ -ಇಬ್ಬರು ಮಹಿಳೆಯರು ಸಾವು


ಬೆಳ್ತಂಗಡಿ ತಾಲೂಕು ಇಂದಬೆಟ್ಟು ಪಂಚಾಯತ್ ವ್ಯಾಪ್ತಿಯ ಪಡಂಬಿಲ ಪಾಲೆದಬೆಟ್ಟು ಎಂಬಲ್ಲಿ ಅಪೆ ರಿಕ್ಷಾವೊಂದು ಸ್ಕಿಡ್ ಆಗಿ ಕಮರಿಗೆ ಮಗುಚಿಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.
ಘಟನೆಯಲ್ಲಿ  ಮೃತಪಟ್ಟವರನ್ನು ನಡ ಗ್ರಾಮದ ಜೊಲ್ಲೊಟ್ಟು ನಿವಾಸಿ ಹಾಜಿರಾಬಿ (55ವ.) ಹಾಗೂ ನಡ ಬೈಲು ದರ್ಕಾಸು ನಿವಾಸಿ ಸಾಜಿದಾಬಿ ಎಂಬವರೆಂದು ಗುರುತಿಸಲಾಗಿದೆ. ರಿಕ್ಷಾದಲ್ಲಿದ್ದ ಮಮ್ತಾಝ್(30ವ.) ಶೈನಾಝ್ (29ವ.) ಎಂಬವರು ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಆಸ್ಪತ್ರಗೆ ಸಾಗಿಸಲಾಗಿದೆ. ರಿಕ್ಷಾ ಚಾಲಕ ನವೀದ್ ಅವರಿಗೂ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾವಳಕಟ್ಟೆಯ ರಿಕ್ಷಾವನ್ನು ಮಂಜೊಟ್ಟಿ ಕಡೆಯವರು ಖರೀದಿಸಿದ ರಿಕ್ಷಾ ಇದೆಂದು ಹೇಳಲಾಗಿದ್ದು ಇದರಲ್ಲಿ ಬಾಡಿಗೆ ನೆಲೆಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಹೋಗಿ ಬರುತ್ತಿದ್ದ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.  ಸ್ಥಳಕ್ಕೆ ಬೆಳ್ತಂಗಡಿ ಟ್ರಾಫಿಕ್ ಠಾಣಾ ಪೊಲೀಸರು ಧಾವಿಸಿದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.