ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಆಮಂತ್ರಣ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರದಲ್ಲಿ ಫೆಬ್ರವರಿ 24 ರಿಂದ ಮಾ. 2ವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮೂಲಸ್ಥಾನ ಗರಡಿ ನೇಮದಲ್ಲಿ ಭಾಗವಹಿಸುವಂತೆ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಆಮಂತ್ರಣ ಪತ್ರಿಕೆ ನೀಡಲಾಯಿತು .
ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ಜೊತೆ ಗೆಜ್ಜೆಗಿರಿ ಕ್ಷೇತ್ರದ ಕುರಿತು ಸಮಾಲೋಚನೆ ನಡೆಸಲಾಯಿತು. ತುಳುನಾಡಿನ ಕಾರಣಿಕ ಪುರುಷರಾದ ಕೋಟಿ ಚೆನ್ನಯರ ಮೂಲ ಸ್ಥಾನದಲ್ಲಿ ನಡೆಯುತ್ತಿರುವ ಪುನರುತ್ಥಾನ ಯೋಜನೆಯ ಕುರಿತು ತಿಳಿದುಕೊಂಡ ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸುವುದಾಗಿ ಭರವಸೆ ನೀಡಿದರು .


ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕರಾದ ನಟ ಸೂರ್ಯೋದಯ ಪೆರಂಪಳ್ಳಿ ರಚಿಸಿರುವ ಕೋಟಿ ಚೆನ್ನಯ ಗ್ರಂಥವನ್ನು ಮುಖ್ಯಮಂತ್ರಿಯವರಿಗೆ ಮಂಜುನಾಥ್ ಸಾಲ್ಯನ್ ನೀಡಿದರು.
ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಯಶವಂತ ದೇರಾಜೆ ಗುತ್ತು ,ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಹೊರೆಕಾಣಿಕೆ ಸಮಿತಿಯ ಸಂಚಾಲಕರಾದ ಮಂಜುನಾಥ ಸಾಲ್ಯಾನ್ ಬೆಳ್ತಂಗಡಿ , ಕೊಲ್ಲಿ ರಾಷ್ಟ್ರಗಳ ಸಮನ್ವಯ ಸಮಿತಿ ಸಂಚಾಲಕ ಪ್ರಶಾಂತ್ ಪೂಜಾರಿ ಓಮಾನ್, ದೀಪಕ್ ಸಜಿಪ ಉಪಸ್ಥಿತರಿದ್ದರು .

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.