ಮರೋಡಿಯಲ್ಲಿ ಮಹಿಳೆಯರ ಆರೋಗ್ಯ ಜಾಗೃತಿ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ವೇಣೂರು: ಮರೋಡಿ ಗ್ರಾಮದ ಮಾವಿನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ವಿಭಾಗದಿಂದ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮವು ಫೆ.೧೭ ರಂದು ಜರಗಿತು.
ಆಳ್ವಾಸ್ ಕಾಲೇಜು ಆಫ್ ನರ್ಸಿಂಗ್ ವಿಭಾಗದ ಮುಖ್ಯಸ್ಥೆ ಪ್ರೊ| ಲಕ್ಷ್ಮೀದೇವಿ ಬಿ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ,6 ವರ್ಷದೊಳಗಿನ ಮಕ್ಕಳ ಪೌಷ್ಠಿಕತೆ ಮಟ್ಟವನ್ನು ಹಾಗೂ ಆರೋಗ್ಯ ಸ್ಥಿತಿಯನ್ನು ಸುಧಾರಿಸುವುದು, ಮಗುವಿನ ಮಾನಸಿಕ, ಸಾಮಾಜಿಕ, ದೈಹಿಕ ಸಮರ್ಪಕ ಬೆಳವಣಿಗೆಗೆ ಬುನಾದಿ ಹಾಕುವುದು, ಅಪೌಷ್ಠಿಕತೆ ಕಾರಣ ಪೌಷ್ಠಿಕ ಆಹಾರಗಳ ಸೇವನೆ, ರೋಗನಿವಾರಣೆ, ತಾಯಿ ಮತ್ತು ಮಗುವಿನ ಸರ್ವಾಂಗೀಣ ಪೌಷ್ಠಿಕತೆಯ ಆಹಾರಗಳು, ಮಹಿಳೆಯರ ಆರೋಗ್ಯ ಸ್ವಚ್ಛತೆ, 40 ವರ್ಷ ದಾಟಿದ ಮಹಿಳೆಯರಿಗೆ ಬರುವ ತೊಂದರೆಗಳು ಹಾಗೂ ಗರ್ಭಿಣಿಯರು ಯಾವ ರೀತಿ ಇರಬೇಕು, ಬಾಣಂತಿಯರ ಹಾರೈಕೆ, ಈ ಎಲ್ಲಾ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು.

ಮರೋಡಿ ಗ್ರಾಮದ ಸ್ತ್ರೀಶಕ್ತಿ ಗುಂಪಿನ ಸದಸ್ಯರು ಹಾಗೂ ಅಂಗನವಾಡಿ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಆಳ್ವಾಸ್ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿ ನವೀನ್ ಸ್ವಾಗತಿಸಿ, ಅಂಗನವಾಡಿ ಶಿಕ್ಷಕಿ ಅಕ್ಷತಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.