ಬೆಳ್ತಂಗಡಿ ಕೆಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಎಲೋಸಿಯಸ್ ಲೋಬೊ ಉಪಾಧ್ಯಕ್ಷರಾಗಿ ಜೋನ್ ಆರ್ವಿನ್ ಡಿಸೋಜ

ಬೆಳ್ತಂಗಡಿ: ಇಲ್ಲಿನ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮುಂದಿನ ಸಾಲಿನ ನೂತನ ಅಧ್ಯಕ್ಷರಾಗಿ ಎಲೋಸಿಯಸ್ ಎಸ್.ಲೋಬೊ , ಉಪಾಧ್ಯಕ್ಷರಾಗಿ ಜೋನ್ ಆರ್ವಿನ್ ಡಿಸೋಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರಿ ಅಭಿವೃದ್ಧಿ ಅಧಿಕಾರಿ ಸುಕನ್ಯಾ ಅವರು ಚುನಾವಣಾಧಿಕಾರಿಯಾಗಿ ಮಾ.2 ರಂದು ಈ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಲೋಸಿಯಸ್ ಎಸ್. ಲೋಬೋ ಅವರು  ಸಂಘದಲ್ಲಿ ಎರಡು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವಿಯಾಗಿದ್ದಾರೆ.
ಪ್ರಸ್ತುತ ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ, ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್‌ನ ಪಾಲನಾ ಮಂಡಳಿಯ ಉಪಾಧ್ಯಕ್ಷರಾಗಿ, ಚರ್ಚ್ ನ ಕಾರ್ಯದರ್ಶಿಯಾಗಿ, ದ.ಕ ಜಿಲ್ಲಾ ಕ್ರೈಸ್ತ ವಿವಾಹ ನೋಂದಾವಣಾಧಿಕಾರಿಯಾಗಿ, ಹಿರಿಯ ನ್ಯಾಯವಾದಿಯಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಾನ್ ಅರ್ವಿನ್ ಡಿ ಸೋಜ ಅವರು ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯ ಅಭಿವೃದ್ಧಿ ಅಧಿಕಾರಿಯಾಗಿ, ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನ ಪಾಲನಾ ಮಂಡಳಿಯ ಮಾಜಿ ಉಪಾಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದಾರೆ. ಉತ್ತಮ‌ ಕಾರ್ಯಕ್ರಮ ಉದ್ಘೋಷಕರಾಗಿಯೂ ಅವರು ಚಿರಪರಿಚಿತರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.