ಡಾ| ಯು.ಪಿ.ಶಿವಾನಂದ್ ಮತ್ತು ಡಾ| ಎಂ.ಎನ್.ರಾಜೇಂದ್ರ ಕುಮಾರ್‌ರಿಗೆ ಕದಂಬ ರಾಜ್ಯ ಪ್ರಶಸ್ತಿ ಪ್ರದಾನ

Advt_NewsUnder_1
Advt_NewsUnder_1
Advt_NewsUnder_1

ಕದಂಬ ಪ್ರಶಸ್ತಿ ಸ್ವೀಕರಿಸಲು ರಾಮನಗರಕ್ಕೆ ಆಗಮಿಸಿದ ಸುದ್ದಿ ಬಿಡುಗಡೆಯ ಸಂಪಾದಕ ಡಾ| ಯು.ಪಿ.ಶಿವಾನಂದ್ ಹಾಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್‌ರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಪಿ.ಕೃಷ್ಣೇ ಗೌಡರು ಬರಮಾಡಿಕೊಂಡರು.

ಶಶಿಕುಮಾರ್ ಶೆಟ್ಟಿ ಬಾಲ್ಯೊಟ್ಟು, ಉದ್ಯಮಿ ಸತೀಶ್, ರಕ್ಷಣಾ ವೇದಿಕೆಯ ಪದಾಧಿಕಾರಿಗಳನ್ನು ಕಾಣಬಹುದು.ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಮನಗರ ಜಿಲ್ಲಾ ಘಟಕ ವತಿಯಿಂದ ಫೆ.೨೯ರಂದು ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ೧೧, ೧೨ನೇ ರಾಜ್ಯ ಸಮಾವೇಶ ಹಾಗೂ ಸುಗ್ಗಿ ಸಂಭ್ರಮದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಸುದ್ದಿ ಬಿಡುಗಡೆ ಸಂಪಾದಕ ಡಾ. ಯು.ಪಿ. ಶಿವಾನಂದ ಅವರಿಗೆ ಕದಂಬ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ದುಬೈ ಉದ್ಯಮಿ ಅಶ್ರಫ್ ಶಾ ಮಾಂತೂರ್, ರಾಜ್ಯ ಪ್ರಶಸ್ತಿ ವಿಜೇತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ, ಆರ್. ಮನ್ಸಯ್ಯ, ಬಸವರಾಜ್ ಸಬ್ರದ್, ರಾಘವೇಂದ್ರ ಬೆಂಗಳೂರು ಅವರಿಗೂ ಇದೇ ಸಂದರ್ಭ ಕದಂಬ ರಾಜ್ಯ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ತುಮಕೂರು ಜಿಲ್ಲೆಯ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವ ಧೂತ ಸ್ವಾಮೀಜಿ ಮತ್ತು ಕೊಡಗು ಜಿಲ್ಲೆ ಕನ್ನಡ ಮಠದ ಶ್ರೀ ಮ.ನಿ.ಪ್ರ. ಚನ್ನಕೇಶವ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಪಿ. ಕೃಷ್ಣೇಗೌಡರು ಅಧ್ಯಕ್ಷತೆ ವಹಿಸಿದ್ದರು. ಸಂಘಟನೆಯ ದಕ್ಷಿಣ ಕನ್ನಡ ವಲಯ ಅಧ್ಯಕ್ಷ ಮಹಮ್ಮದ್ ಕುಕ್ಕುವಳ್ಳಿ, ಜೆಡಿಎಸ್ ಮುಖಂಡ ಸಯ್ಯದ್ ಮೀರ್ ಸಾಹೇಬ್ ಕಡಬ, ಸಂಘಟನೆಯ ಕೊಡಗು ಜಿಲ್ಲಾ ಅಧ್ಯಕ್ಷ ಗುಣೇಶ್ ಮೊದಲಾದವರು ಉಪಸ್ಥಿತರಿದ್ದರು. ಬೆಳಿಗ್ಗೆ ನಡೆದ ಕನ್ನಡ ರಥ ಮೆರವಣಿಗೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚಾಲನೆ ನೀಡಿದರು. ಅತಿಥಿಗಳನ್ನು ಹುಲಿ ವೇಷಧಾರಿಗಳು ಹಾಗೂ ದಫ್ ತಂಡ ವೇದಿಕೆಗೆ ಕರೆತಂದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.