ಮಾ.8ರಂದು ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಉಚಿತ ಸಾಮೂಹಿಕ ವಿವಾಹ, ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ

ಪುಂಜಾಲಕಟ್ಟೆ : ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ೩೬ನೇ ಸಂಭ್ರಮಾಚರಣೆಯ ಪ್ರಯುಕ್ತ ೧೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಾಗೂ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಮಾ.೮ ರಂದು ಇಲ್ಲಿನ ಬಂಗ್ಲೆ ಮೈದಾನದಲ್ಲಿ ಜರಗಲಿದೆ.

ವಿವಿಧ ಸ್ತಬ್ಧ ಚಿತ್ರ ಹಾಗೂ ಜಿಲ್ಲೆಯ ಪ್ರಸಿದ್ಧ ಕಲಾತಂಡಗಳು, ಕೇರಳ ಚೆಂಡೆಗಳ ಆಕರ್ಷಣೆಯೊಂದಿಗೆ ಬೆಳಿಗ್ಗೆ ೯.೩೦ಕ್ಕೆ ಬಸವನಗುಡಿ ಬಸವೇಶ್ವರ ದೇವಾಲಯದಿಂದ ಮದುವೆ ಮಂಟಪದ ವರೆಗೆ ವಧು-ವರರ ದಿಬ್ಬಣ ಮೆರವಣಿಗೆ ಸಾಗಿ ಬರಲಿದೆ. ಗುರುವಾಯನಕೆರೆ ಕೃಷ್ಣಭಟ್ ಅವರ ಪೌರೋಹಿತ್ಯದಲ್ಲಿ ಮಧ್ಯಾಹ್ನ ೧೧.೩೦ರ ಶುಭ ಮುಹೂರ್ತದಲ್ಲಿ ೧೦ ಜೋಡಿ ವಧು-ವರರಿಗೆ ಸಾಮೂಹಿಕ ವಿವಾಹ ನಡೆಯಲಿದೆ. ಬಳಿಕ ಸಭಾಕಾರ್ಯಕ್ರಮದಲ್ಲಿ ವಿವಿಧ ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಮಾಡಲಾಗುವುದು ಎಂದು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ ತುಂಗಪ್ಪ ಬಂಗೇರ ತಿಳಿಸಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿರುವರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್  ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸಲಿರುವರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿರುವರು. ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮೋಹನ್ ಆಳ್ವ ಮಂಗಳಸೂತ್ರ ವಿತರಿಸಲಿರುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್, ಶಾಸಕ ಹರೀಶ್ ಪೂಂಜ ಸಹಿತ ವಿವಿಧ ಕ್ಷೇತ್ರಗಳ ಗಣ್ಯ ವ್ಯಕ್ತಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮಧ್ಯಾಹ್ನ ಸಾರ್ವಜನಿಕರಿಗೆ ವಿವಾಹ ಭೋಜನ ಏರ್ಪಡಿಸಲಾಗಿದೆ. ಬಳಿಕ ಕ್ಲಬ್ ವತಿಯಿಂದ ತೃತೀಯ ವರ್ಷದ ಶಿಶಿರ್ ಕುಮಾರ್ ಸ್ಮೃತಿ ಕಾರ್‍ಯಕ್ರಮ, ಸಾಂಸ್ಕೃತಿಕ ಕಾರ್‍ಯಕ್ರಮದ ಪ್ರಯುಕ್ತ ವಾಮದಪದವು ಸ.ಪ್ರ.ದ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಯಕ್ಷಗಾನ, ತುಳುನಾಟಕ ನಡೆಯಲಿದೆ ಎಂದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.