ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ ಹೇಮಚಂದ್ರರಿಗೆ ಚಿನ್ನದ ಪದಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇತ್ತೀಚೆಗೆ ಧಾರವಾಡದಲ್ಲಿ ಜರುಗಿದ ರಾಜ್ಯ ಮಟ್ಟದ ಸಿವಿಲ್ ಸರ್ವಿಸ್ ಸ್ಪರ್ಧಾ ಕೂಟ-2020ರಲ್ಲಿ ಪವರ್ ಲಿಪ್ಟಿಂಗ್ ಸ್ಪರ್ಧೇಯ 75 ಕೆ.ಜಿ ವಿಭಾಗದಲ್ಲಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಬಬ್ಬುಕಟ್ಟೆ ಇವರು ಚಿನ್ನದ ಪದಕವನ್ನು ಪಡೆದಿದ್ದಾರೆ.

ಇವರು ಈ ಸ್ಪರ್ಧಾ ಕೂಟದಲ್ಲಿ ಸತತವಾಗಿ 25 ವರ್ಷಗಳಿಂದ ಭಾಗವಹಿಸುತ್ತಿದ್ದು, ಪದಕಗಳನ್ನು ಪಡೆಯುತ್ತಾ ಬಂದಿದ್ದಾರೆ. ಇವರು ದ.ಕ.ಜಿ.ಪಂ ಸಮಾಜ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರಾಗಿದ್ದು, ಪ್ರಸ್ತುತ ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ-ಪುತ್ತೂರು ಇಲ್ಲಿ ಸಹಾಯಕ ನಿರ್ದೇಶಕರಾಗಿ ಪ್ರಭಾರದಲ್ಲಿರುತ್ತಾರೆ. ಇವರು ತೊಕ್ಕೊಟ್ಟು ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.