HomePage_Banner_
HomePage_Banner_

ಸರ್ಕಾರದ ಆದೇಶದ ಮೇರೆಗೆ ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಿಕೆ

ಬೆಳ್ತಂಗಡಿ: ಇಲ್ಲಿನ ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಮಾ.23 ರಂದು ನಡೆಯಬೇಕಾಗಿದ್ದ ಚುನಾವಣೆಯನ್ನು ಸರ್ಕಾರದ ಆದೇಶದ ಅನ್ವಯ ಮುಂದೂಡಲಾಗಿದೆ ಎಂದು ಚುನಾವಣಾಧಿಕಾರಿಯಾಗಿರುವ ತಹಶೀಲ್ದಾರ್ ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಗೊಂಡ ಬೆನ್ನಿಗೆ ರಾಯಚೂರು ಜಿಲ್ಲೆಯ ಸಿಂಧನೂರು ನಗರ ಸಭೆಯ ಅಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಶ್ನಿಸಿ ನಗರಸಭೆ ಸದಸ್ಯ ಆಲಂ ಪಾಷಾ ಸಲ್ಲಿಸಿದ ತಕರಾರು ಅರ್ಜಿ ಯನ್ನು ಪರಿಶೀಲಿಸಿದ ರಾಜ್ಯ ಹೈಕೋರ್ಟ್ ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಕ್ರಮಕ್ಕೆ ಮುಂದಾಗದಂತೆ ರಾಜ್ಯ ಸರ್ಕಾರ ಕ್ಕೆ ನಿರ್ದೇಶನ ನೀಡಿತ್ತು. ಆದರೆ ಈ ಬಗ್ಗೆ ಸರ್ಕಾರದಿಂದ ಯಾವುದೇ ಆದೇಶ ಬಾರದ ಹಿನ್ನೆಲೆಯಲ್ಲಿ ತಾಲೂಕು ಚುನಾವಣಾಧಿಕಾರಿಯವರು ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆ ನಡೆಸುವುದಾಗಿ ಮಾ.18 ರಂದು ಸದಸ್ಯರಿಗೆ ನೋಟಿಸ್ ಜಾರಿ ಮಾಡಿದರು.

ಮಾ.19ರಂದು ಸರ್ಕಾರದಿಂದ ಆದೇಶ ಬಂದಿದ್ದು ಪಟ್ಟಣಪಂಚಾಯತ್ ಚುನಾವಣೆಯನ್ನು ಮುಂದೂಡಲಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.