HomePage_Banner_
HomePage_Banner_
HomePage_Banner_

ಕೊರೊನಾ ವೈರಸ್ ಭೀತಿ: ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ

Advt_NewsUnder_1

 ರಾಜ್ಯದಲ್ಲಿ ನಡೆಯುವ ಚುನಾವಣೆಗಳಿಗೂ ತಡೆ ಎಂದ ಸಿಎಂ ಯಡಿಯೂರಪ್ಪ

ಬೆಳ್ತಂಗಡಿ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮಾ.27ರಿಂದ ಆರಂಭವಾಗಬೇಕಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೇರಿದಂತೆ ಇತರ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದರಿಂದ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಂದೆಡೆ ಸೇರಿ ಪರೀಕ್ಷೆ ಬರೆಯಲು ಹಾಜರಾಗುವುದರಿಂದ ಕೊರೊನಾ ವೈರಸ್ ಹರಡುವ ಭೀತಿ ಹೆಚ್ಚಿರುತ್ತದೆ ಎಂಬ ದೃಷ್ಟಿಯಿಂದ ಅದನ್ನು ತಪ್ಪಿಸಲು ಸರಕಾರ ಈ ಕ್ರಮ ಕೈಗೊಂಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಬದಲಾವಣೆ ಇಲ್ಲ : ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಆರಂಭಗೊಂಡಿದ್ದು ಸೋಮವಾರ ಕೊನೆಯ ಪರೀಕ್ಷೆ ನಡೆಯಲಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.

ಚುನಾವಣೆಗಳು ಮುಂದೂಡಿಕೆ: ರಾಜ್ಯದಲ್ಲಿ ನಿಗದಿಯಾಗಿರುವ ಎಲ್ಲ ಚುನಾವಣೆಗಳನ್ನು ಸಹ ಮುಂದೂಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಪ್ರತ್ಯೇಕ ಕೋವಿಡ್ -19 ಆಸ್ಪತ್ರೆ: ಕೊರೊನಾ ವೈರಸ್ ಚಿಕಿತ್ಸೆ ಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸಮುಚ್ಚಯ ದಲ್ಲಿ 1500 ಕ್ಕೂ ಹೆಚ್ಚಿನ ಹಾಸಿಗೆಗಳನ್ನು ಒಳಗೊಂಡಿದೆ ಎಂದು ಸಿಎಂ ತಿಳಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.