ಅನಗತ್ಯ ಕಾರಣ ಹೇಳಿಕೊಂಡು ರಸ್ತೆಗೆ ಇಳಿದರೆ ಸೂಕ್ತ ಕ್ರಮ; ಡಾ.ಪಿ.ಎಸ್ ಹರ್ಷ ಪೊಲೀಸ್ ಕಮೀಷನರ್

ಬೆಳ್ತಂಗಡಿ: ಜಿಲ್ಲೆಯಾದ್ಯಂತ ಜಾರಿಯಾಗಿರುವ ನಿಷೇದಾಜ್ಞೆಯನ್ನು ಉಲ್ಲಂಘಿಸಿ ರಸ್ತೆಗೆ ಇಲ್ಲಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮೀಷನರ್ ಡಾ.ಪಿ.ಎಸ್ ಹರ್ಷ ಅವರು ಹೇಳಿದ್ದಾರೆ. ನಗರದಲ್ಲಿ ಕೊರೊನಾ ವೈಸರ್ ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮವನ್ನು ಉಲ್ಲಂಘಿಸಿ ಮಂಗಳೂರು ನಗರದಲ್ಲಿ ತೊಂದರೆ ಉಂಟು ಮಾಡಿದರೇ ತಕ್ಷಣವೇ ಸೂಕ್ತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ತಿಳಿಸಿದರು.

ಕೋವಿಡ್‌- 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾ. 22ರ ರಾತ್ರಿ 9 ಗಂಟೆಯಿಂದ ಮಾ. 31ರ ಮಧ್ಯರಾತ್ರಿ 12 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ನಿಷೇಧಾಜ್ಞೆ ವಿಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಆದೇಶಿಸಿದ್ದಾರೆ.

ನಿಷೇಧಾಜ್ಞೆ ವೇಳೆ ಸಾರ್ವಜನಿಕರು ತುರ್ತು ಮತ್ತು ಆವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ಮನೆಗಳಿಂದ ಹೊರಬರುವುದನ್ನು ಕಡ್ಡಾಯ ವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ತಮ್ಮ ಮನೆಯಲ್ಲಿಯೂ ಜನ ಸೇರುವಂತಹ ಯಾವುದೇ ಕಾರ್ಯಕ್ರಮಗಳನ್ನು ಮಾಡುವುದು ನಿರ್ಬಂಧಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.