ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನಾಲ್ವರಿಗೆ ಕೊರೊನಾ ಸೋಂಕು ದೃಢ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಮತ್ತೆ ನಾಲ್ವರಿಗೆ (ಪಾಸಿಟಿವ್) ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಸೋಂಕು ದೃಢಪಟ್ಟ ನಾಲ್ವರು ಕೇರಳದ ಕಾಸರಗೋಡು ಜಿಲ್ಲೆಯವರು ಎಂದು ತಿಳಿದು ಬಂದಿದೆ. ಈ ಪೈಕಿ ಮೂವರು ದುಬೈಯಿಂದ ಹಾಗೂ ಒಬ್ಬ ಸೌದಿಯಿಂದ ಬಂದಿದ್ದಾರೆ. ಮಾರ್ಚ್ 20ರಂದು ಮುಂಜಾನೆ 5:30ಕ್ಕೆ ಸ್ಪೈಸ್ ಜೆಟ್ ಮೂಲಕ ಮೂವರು ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ್ದರು. ಮೊನ್ನೆ ಕೊರೊನಾ ಸೋಂಕು ದೃಢಪಟ್ಟ ಭಟ್ಕಳದ ವ್ಯಕ್ತಿಯ ಜೊತೆ ಬಂದಿದ್ದರೆನ್ನಲಾಗಿದೆ. ಒಬ್ಬರು ಸೌದಿಯಿಂದ ಮಂಗಳೂರಿಗೆ ಬಂದಿದ್ದಾರೆ.

ನಾಲ್ವರಲ್ಲಿ 3 ಮಂದಿ ಮಂಗಳೂರಿನ ಮೊದಲ ಪ್ರಕರಣದ ವ್ಯಕ್ತಿಯ ವಿಮಾನದಲ್ಲಿ ಬಂದಿದ್ದು,
ಮೂವರು ವೆನ್ ಲಾಕ್ ಆಸ್ಪತ್ರೆ ಯಲ್ಲಿ ಒಬ್ಬ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಒಟ್ಟು ಐವರಿಗೆ ಸೋಂಕು ದೃಢಪಟ್ಟಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.