ಈ ಬಾರಿಯ ಪಡಿತರ ವಿತರಣೆಗೆ ಟೋಕನ್ ವ್ಯವಸ್ಥೆ

* ಕೊರೊನಾ ವೈರಸ್ ಜಾಗೃತಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ನೀರು, ಸೋಪು ಬಳಕೆ
* ಒಂದು ಮೀಟರ್ ಅಂತರ ಕಾಯ್ದು ಪಡಿತರ ಪಡೆಯಿರಿ

 ಸಾಂದರ್ಭಿಕ ಚಿತ್ರ

ಬೆಳ್ತಂಗಡಿ: ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ತಾಲೂಕಿನ ಪಡಿತರ ವಿತರಣೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ಬಿಪಿಎಲ್ ಕಾರ್ಡುದಾರರಿಗೆ ಈ ಬಾರಿಯು ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ಉಚಿತವಾಗಿ ವಿತರಿಸುವ ವ್ಯವಸ್ಥೆಯನ್ನು ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾಡಿದೆ.

ಪಡಿತರಕ್ಕೆ ಟೋಕನ್ ವ್ಯವಸ್ಥೆ :
ಬಿಪಿಎಲ್ ಚೀಟಿದಾರರಿಗೆ ಪಡಿತರ ಪಡೆಯಲು ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಒಟಿಪಿ ಹಾಗೂ ಕೈ ಬೆರಳಚ್ಚು ಪಡೆಯುವ ಸ್ವಚ್ಛತೆ ಹಾಗೂ ಮುಂಜಾಗ್ರತೆ ಕ್ರಮವಾಗಿ ಈ ಬಾರಿಯ ಪಡಿತರ ವಿತರಣೆ ವೇಳೆಯಲ್ಲಿ ಟೋಕನ್ ವ್ಯವಸ್ಥೆ ಮಾಡಲಾಗಿದೆ.
“ತಾಲೂಕಿನ ಬಿಪಿಎಲ್ ಚೀಟಿದಾರರಿಗೆ ಪಡಿತರ ವಿತರಿಸುವ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಲಾಗುವುದು. ಸ್ವಚ್ಛತೆಗೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಗೆ ಆದ್ಯತೆ ನೀಡಲಾಗುವುದು. ಸ್ವಚ್ಛತೆಗಾಗಿ ಸೋಪು, ನೀರು ಇಡಲು ಬಂಗಾಡಿಯ ಪಡಿತರ ಅಂಗಡಿಯಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ” ಎಂದು ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ತಿಳಿಸಿದರು.

ನ್ಯಾಯಬೆಲೆ ಅಂಗಡಿಗಳಲ್ಲಿ ಕೈಗೊಂಡ ಮುಂಜಾಗ್ರತ ಕ್ರಮಗಳು:
* ಕೊರೊನಾ ವೈರಸ್ ಹರಡದಂತೆ ಪಡಿತರ ಕೊಳ್ಳುವ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ನೀರು,ಸೋಪು ಬಳಸಿ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳುವುದು.
* ಪಡಿತರ ಪಡೆಯಲು ಸರತಿ ಸಾಲಿನಲ್ಲಿ ನಿಂತಾಗ 1 ಮೀಟರ್ ಅಂತರ ಕಾಯ್ದುಕೊಂಡು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದಾಗಿದೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.