ದಕ್ಷಿಣ ಕನ್ನಡ ಜಿಲ್ಲೆ ನಾಳೆಯಿಂದ ಸಂಪೂರ್ಣ ಬಂದ್

 ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಿದ ಉಸ್ತುವಾರಿ ಸಚಿವ

ಬೆಳ್ತಂಗಡಿ: ವೈರಸ್ ಸೋಂಕಿತರ ಸಂಖ್ಯೆ7ಕ್ಕೆ ಏರಿರುವ ಹಿನ್ನೆಲೆಯಲ್ಲಿ ಮಾ.೨೮ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧಿಸದಿದ್ದರೆ ಮುಂದಿನ ದಿನಗಳು ಇನ್ನಷ್ಟು ಅಪಾಯಕಾರಿಯಾಗಲಿವೆ. ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕೊರೊನಾ ಪಾಸಿಟಿವ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿರುವುದರಿಂದ ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು. ಸಾರ್ವಜನಿಕ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರವನ್ನು ಅನಿವಾರ್ಯ ವಾಗಿ ತೆಗೆದುಕೊಳ್ಳಬೇಕಿದೆ. ಪ್ರತಿಯೊಬ್ಬರು ಮನೆಯೊಳಗೆ ಕೂತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.

ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಅವರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ನಾಳೆಯಿಂದ ಎಲ್ಲ ಚಟುವಟಿಕೆ, ವಾಣಿಜ್ಯ ವ್ಯವಹಾರಗಳು , ಅಂಗಡಿ ಮುಂಗಟ್ಟುಗಳು ಬಂದ್ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.