ದ.ಕ. ಜಿಲ್ಲೆ ಭಾನುವಾರವೂ ಸಂಪೂರ್ಣ ಬಂದ್

Advt_NewsUnder_1
Advt_NewsUnder_1

ಬೆಳ್ತಂಗಡಿ : ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಹೆಚ್ಚುವುದನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲೆ ಭಾನುವಾರವೂ (ಮಾ.29) ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ
ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹಾಗೆಯೇ ತುರ್ತು ಸೇವೆಗಳಾದ ಹಾಲು ವಿತರಣೆ, ಮೆಡಿಕಲ್, ಪತ್ರಿಕೆ, ಪೆಟ್ರೋಲ್ ಬಂಕ್‌, ಅಡುಗೆ ಅನಿಲ ವಿತರಣೆಗೆ ವಿನಾಯಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ಸುಮಾರು 400 ವರ್ತಕರ ಸಭೆ ಮಾಡಿ ಮನೆ ಮನೆಗೆ ಆಹಾರ ಸಾಮಾಗ್ರಿ ಪೂರೈಕೆ ಮಾಡುವ ಕುರಿತಾಗಿ ಚರ್ಚೆ ನಡೆಸಲಾಗುವುದು. ಹಾಗೆಯೇ ಆನ್‌ಲೈನ್‌ ಮೂಲಕವೂ ಆರ್ಡರ್‌ ಮಾಡಲಾಗುತ್ತದೆ. ಆನ್‌ಲೈನ್‌ ಮೂಲಕ ಸಂಪರ್ಕ ಮಾಡಲು ಸಾಧ್ಯವಾಗದವರು 1077 ಸಂಖ್ಯೆಗೆ ಕರೆ ಮಾಡಬಹುದು ಎಂದು ಹೇಳಿದ್ದಾರೆ.

ವಲಸೆ ಕಾರ್ಮಿಕರಿಗೆ ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಆಹಾರ ವಿತರಣೆ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.