ನಾಳೆಯೂ ದ.ಕ ಜಿಲ್ಲೆ ಸಂಪೂರ್ಣ ಬಂದ್; ಸಚಿವ ಕೋಟ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು ದಿನದ ಸಂಪೂರ್ಣ ಬಂದ್ ಸೋಮವಾರವೂ ಮುಂದುವರಿಯಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ಧಾರೆ.

ಮಂಗಳೂರಿನ ಜಿಲ್ಲಾಡಳಿತದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವರು, ಎರಡು ದಿನದ ಕಡ್ಡಾಯ ಬಂದ್ ಗೆ ಬೆಂಬಲ ನೀಡಿದ್ದೀರಿ. ಕೋವಿಡ್-19 ನಿಯಂತ್ರಣಕ್ಕಾಗಿ ನಾವು ಕಟು ನಿರ್ಧಾರ ತೆಗೆದುಕೊಂಡಿದ್ದೇವು ಎಂದರು.

ಸೋಮವಾರ ಕೂಡಾ ದಕ್ಷಿಣ ಕನ್ನಡದಲ್ಲಿ ಸಂಪೂರ್ಣ ಬಂದ್ ಮುಂದುವರಿಯಲಿದ್ದು, ಮಂಗಳವಾರ ಒಂದು ದಿನ ಅಂಗಡಿಗಳು ತೆರೆದಿರಲಿದೆ. ಮಂಗಳವಾರ ಬೆಳಗ್ಗೆ 6 ರಿಂದ 3 ಗಂಟೆ ತನಕ ದಿನಸಿ ಅಂಗಡಿಗಳು ತೆರೆದಿರುತ್ತದೆ ಎಂದು ಸಚಿವರು ಹೇಳಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.