ಕ್ವಾರೆಂಟೈನ್ ನಲ್ಲಿರುವವರ ಚಲನವಲನ ವೀಕ್ಷಣೆಗೆ ಜಿಪಿಎಸ್ ಆಧಾರಿತ ಆ್ಯಪ್

ಬೆಳ್ತಂಗಡಿ: ಕೊರೊನ ಸೋಂಕು ಹೊಂದಿರುವರ ಜೊತೆ ಸಂಪರ್ಕ ಹೊಂದಿ, ವೈರಸ್ ಸೋಂಕಿಗೆ ತುತ್ತಾಗುವ ಸಾಧ್ಯತೆ ಇರುವ ಶಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ. ಹೀಗೆ ಪರಿವೀಕ್ಷಣೆಯಲ್ಲಿರುವವರ ಮಾಹಿತಿಗೆ ಗಾಗಿ ಜಿಪಿಎಸ್ ಆಧಾರಿತ ಆಪ್ ಬಳಕೆಗೆ ಬೆಳ್ತಂಗಡಿ ಯಲ್ಲಿ ದೇಶದಲ್ಲೇ‌‌ ಪ್ರಥಮ‌ ಪ್ರಯತ್ನ ನಡೆಯುತ್ತಿದೆ.

ಹೀಗೊಂದು ಮಾಹಿತಿ ಸುದ್ದಿಗೆ ಶಾಸಕರ ಶ್ರಮಿಕ‌ ಕಚೇರಿಯ ಅಧಿಕೃತ ಮೂಲಗಳಿಂದ ಲಭ್ಯವಾಗಿದೆ.


ಆಪ್‌‌ ಕೆಲಸ‌ ಹೇಗಿರುತ್ತದೆ?

ಕೊರೊನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಕೇಂದ್ರ‌ ಮತ್ತು ರಾಜ್ಯ ಸರಕಾರಗಳು ಈಗಾಗಲೇ ಆತಂಕಕ್ಕೆ ಒಳಗಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಸಾವಿರಾರು ಮಂದಿ ಹೋಮ್ ಕ್ವಾರಂಟೈನ್ ನಲ್ಲಿ ತಮ್ಮ ತಮ್ಮ ಮನೆಯಗಳಲ್ಲೇ ನಿಗಾ ವ್ಯವಸ್ಥೆಯಲ್ಲಿ ಇದ್ದಾರೆ.

ಆದರೆ ಇತ್ತೀಚಿನ ಕೆಲವು ದಿನಗಳಿಂದ ಹೀಗೆ ಹೋಮ್ ಕ್ವಾರಂಟೈನ್ ಆಗಿರುವ ಕೆಲವು ಶಂಕಿತರು ಸ್ಟ್ಯಾಂಪ್ ಹಾಕಿದ್ದರೂ ಕೂಡ‌ ಮನೆಯಿಂದ ಹಿರಬಂದು ಸಾಮಾನ್ಯರಂತೆ ಓಡಾಟ ನಡೆಸುವ ಮೂಲಕ ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ.

ಇವರನ್ನು ಮನೆಯಲ್ಲೇ ನಿಗಾ ಇರಿಸಲು ಕುಟುಂಬ, ಪೊಲೀಸರು,ಆಶಾ ಕಾರ್ಯಕರ್ತರು, ವೈದ್ಯರು ಹರಸಾಹಸ ಪಡುತ್ತಿರುವ ಹಿನ್ನೆಲೆಯಲ್ಲಿ ಐಸರ್ಚ್ ಎಂಬ ಸಂಸ್ಥೆಯ ನೆರವಿನಿಂದ ಹೊಸ ಆಪ್ ಬಿಡುಗಡೆ ಮಾಡಲಾಗಿದೆ. COVID19 BLT DATABASE ಅನ್ನುವ ಈ ಆಪ್ ಬೆಳ್ತಂಗಡಿ ತಾಲೂಕು ಆಡಳಿತ, ತಹಶೀಲ್ದಾರರು, ಪೊಲೀಸ್ ಇಲಾಖೆ, ಆರೋಗ್ಯ, ಕಂದಾಯ, ನಾಗರೀಕ ಸರಬರಾಜು ಇಲಾಖೆ, ಶ್ರಮಿಕ ಬೆಳ್ತಂಗಡಿ ಶಾಸಕರ ಕಚೇರಿ ಹಾಗೂ ಐ ಸರ್ಚ್ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಜಿಪಿಎಸ್ ಆಧಾರಿತ ಆಪ್ ಬಳಸಿ ಸೋಂಕಿತರ ಮೇಲೆ ನಿಗಾ ಇಡುವ ಕಾರ್ಯಕ್ಕೆ ಮುಂದಾಗಿದೆ.

ಪ್ರಾಯೋಗಿಗ ನೆಲೆಯಲ್ಲಿ ಅಳವಡಿಕೆ;

ಈಗಾಗಲೇ ಇದರ ಪೂರ್ವ ಸಿದ್ಧತೆ ಮುಗಿದಿದ್ದು, ಈಗಷ್ಟೇ ಇಲಾಖೆಗಳ ಉಪಯೋಗಕ್ಕೆ ನೀಡಲಾಗುತ್ತದೆ. ತಾಲೂಕಿನ ತಣ್ಣೀರುಪಂಥ ಗ್ರಾಮದಲ್ಲಿ ಒಂದು ಕೋವಿಡ್ 19 ಪ್ರಕರಣ ಬೆಳಕಿಗೆ ಬಂದ ಬಳಿಕ ಈ ತಂತ್ರಜ್ಞಾನ ಬಳಸಲು ಯೋಜನೆ ಮಾಡಲಾಯಿತು. ಹೋಮ್ ಕ್ವಾರಂಟೈನ್ ಆಗಿರುವವರ ಮೇಲೆ ಅಧಿಕಾರಿಗಳಿಗೆ ನಿಗಾ ಇರಿಸಲು ಈ ವ್ಯವಸ್ಥೆ ನೆರವಾಗಲಿದೆ. ಜಿಪಿಎಸ್ ಆಧಾರಿತ ಆಪ್ ಮೂಲಕ ವಾರ್ ರೂಮಲ್ಲಿ ಕೂತು ಹೋಮ್ ಕ್ವಾರಂಟೈನ್ ಆಗಿರುವವರು ಎಲ್ಲಿದ್ದಾರೆ ಹೇಗಿದ್ದಾರೆ ಅವರ ಭಾವಚಿತ್ರ ಸಹಿತ ಮಾಹಿತಿಯನ್ನು ಇದರಿಂದ ಪಡೆಯಬಹುದಾಗಿದೆ.

ಈ ಅಪ್ ಕೋವಿಡ್ 19 (ಕೊರೊನಾ ವೈರಸ್) ಶಂಕಿತರನ್ನು ಟ್ರಾಕ್ ಮಾಡುವ ಮುಖಾಂತರ ಸೋಂಕು ಇತರರಿಗೆ ಹರಡುವುದನ್ನು ತಡೆಗಟ್ಟಲು ಸಹಕರಿಸಲಿದೆ.

ಪ್ರಾಯೋಗಿಕ‌ ನೆಲೆಯಲ್ಲಿ‌‌ ಜಾರಿಗೆ ತಂದಿರುವ ಏಪ‌ ಅನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು
ಈ ಸಂದರ್ಭ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ, ಆರೋಗ್ಯಾಧಿಕಾರಿ ಡಾ.‌ಕಲಾಮಧು ಶೆಟ್ಟಿ, ತಹಶಿಲ್ದಾರ್ ಗಣಪತಿ ಶಾಸ್ತ್ರಿ, ಮೊದಲಾದವರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.