HomePage_Banner_
HomePage_Banner_
HomePage_Banner_

ಕೋಮು ಪ್ರಚೋದನಾಕಾರಿ ಸುದ್ದಿ,ಚಿತ್ರ ಪ್ರಕಟಿಸಿದರೆ ಕಠಿಣ ಕ್ರಮ ಸಾಮಾಜಿಕ ಜಾಲತಾಣಿಗರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ

Advt_NewsUnder_1

ಬೆಳ್ತಂಗಡಿ: ಕೊರೊನಾ ವೈರಸ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಒಂದು ನಿರ್ದಿಷ್ಟ ಕೋಮನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಸುದ್ದಿ ಅಥವಾ ಚಿತ್ರಗಳನ್ನು ಪ್ರಸಾರಪಡಿಸುವ ಕಿಡಿಗೇಡಿಗಳ ಮೊಬೈಲ್ ವಶಪಡಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ. 

ಈ ಬಗ್ಗೆ ಎ.6ರಂದು ಪತ್ರಿಕಾ ಪ್ರಕಟನೆ ನೀಡಿ ಸಾಮಾಜಿಕ ಜಾಲತಾಣಗಳಾದ ವಾಟ್ಸ್‍ಪ್ ಸಂದೇಶ ಅಥವಾ ಸ್ಟೇಟಸ್ ಹಾಕುವುದಾಗಲಿ, ಫೇಸ್ ಬುಕ್, ಇನ್‍ಸ್ಟ್ರಾಗ್ರಾಂ ಇತರ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಬರೆದು ಒಬ್ಬರಿಂದ ಇನ್ನೊಬ್ಬರಿಗೆ ಪರಸ್ಪರ ಹರಿಯಬಿಡುವುದು ಕಂಡು ಬಂದಲ್ಲಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ದಕ್ಷಿಣ ಕನ್ನಡ ಪೊಲೀಸ್ ವ್ಯಾಪ್ತಿಯಲ್ಲಿ ಈಗಾಗಲೇ 4 ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಹೋಮ್ ಕ್ವಾರಂಟೈನ್‍ನಲ್ಲಿರುವ ವ್ಯಕ್ತಿಗಳು ಇಂತಹ ಕುಕೃತ್ಯದಲ್ಲಿ ಭಾಗಿಯಾಗಿದ್ದರೆ, ಅಂತಹವರನ್ನು ಆಸ್ಪತ್ರೆಯಲ್ಲಿಟ್ಟು ಕ್ವಾರಂಟೈನ್ ಅವಧಿ ಮುಗಿದ ಬಳಿಕ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.