ಶ್ರೀ ಸೌತಡ್ಕ ಗಣಪತಿ ದೇವಾಲಯದ ಹರಕೆ ಘಂಟೆ ಮಾರಾಟ ಆರೋಪ. ತನಿಖೆಗೆ ಸಚಿವ ಕೋಟ ಆದೇಶ. ನೂತನ ಆಡಳಿತಾಧಿಕಾರಿ ನೇಮಕ.

Advt_NewsUnder_1
Advt_NewsUnder_1
Advt_NewsUnder_1

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಕೊಕ್ಕಡ ಶ್ರೀ ಸೌತಡ್ಕ ಗಣಪತಿ ದೇವಾಲಯದ ಹರಕೆ ಘಂಟೆ ಮಾರಾಟ ವಿಚಾರದಲ್ಲಿ ಸ್ಥಳೀಯ ಶಾಸಕ ಶ್ರೀ ಹರೀಶ್ ಪೂಂಜರವರ ದೂರಿನಂತೆ, ಇಡೀ ಪ್ರಕರಣವನ್ನು ಸೂಕ್ತ ತನಿಖೆಗೆ ಒಳಪಡಿಸಿ, ದೇವಸ್ಥಾನದ ಕಾರ್ಯನಿರ್ವಹಣ ಅಧಿಕಾರಿ ಮೇಲೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು, ರಾಜ್ಯ ಧಾರ್ಮಿಕ ದತ್ತಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಇಲಾಖೆಯ ಆಯುಕ್ತರಿಗೆ ನೀಡಿದ ಆದೇಶದಲ್ಲಿ ತಿಳಿಸಿದ್ದು, ಅಗತ್ಯವಿದ್ದಲ್ಲಿ ಕಾರ್ಯನಿರ್ವಹಣಾ ಅಧಿಕಾರಿಯವರನ್ನು ಅಮಾನತು ಮಾಡಿ, ಪಾರದರ್ಶಕ ತನಿಖೆ ಮಾಡಬೇಕೆಂದು ಸಚಿವರು ಸೂಚಿಸಿದ್ದಾರೆ.

ಈ ಮಧ್ಯೆ ದೇವಳದ ಪ್ರಸ್ತುತ ಆಡಳಿತ ಮಂಡಳಿಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ, ನೂತನ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶಿಲ್ದಾರ್ ಅವರನ್ನು ನೇಮಕ ಮಾಡುವಂತೆ ಸಚಿವ ಕೋಟ ಆದೇಶಿಸಿದ್ದು, ಮುಂದಿನ ಕ್ರಮ ಜರುಗಿಸಲಾಗುವುದೆಂದು ಆಯುಕ್ತರ ಕಚೇರಿಯ ಮೂಲಗಳು ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.