ನ್ಯಾಯಾಲಯದ ಆವರಣದಲ್ಲಿ 40 ಮಂದಿಗೆ ನಗದು, ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

  • ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘದ ಸಹಕಾರ

ಬೆಳ್ತಂಗಡಿ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಲಾಕ್‍ಡೌನ್ ಘೋಷಣೆಯಿಂದಾಗಿ ಬಡವರಿಗೆ, ವಲಸೆ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಖರೀದಿಗೆ ತೊಂದರೆ ಉಂಟಾದ 40 ಮಂದಿಗೆ ತಲಾ ರೂ.200ಯಂತೆ ನಗದು ಹಾಗೂ ಆಹಾರ ಸಾಮಾಗ್ರಿಯ ಕಿಟ್ ವಿತರಿಸಲಾಯಿತು. 

ಬೆಳ್ತಂಗಡಿಯ ನ್ಯಾಯಾಲಯದ ಆವರಣದಲ್ಲಿ ಎ.7ರಂದು ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ, ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ನಾಗೇಶ್ ಮೂರ್ತಿ, ಸಿವಿಲ್ ನ್ಯಾಯಾಧೀಶ ಕೆ.ಎಂ.ಆನಂದ ಮತ್ತು ಹೆಚ್ಚುವರಿ ನ್ಯಾಯಾಧೀಶ ಸತೀಶ್ ಕೆ.ಜಿ. ಅವರ ಸಮ್ಮುಖದಲ್ಲಿ ಬೆಳ್ತಂಗಡಿ, ನಾರಾವಿ, ಉಜಿರೆಯ ವಲಸೆ ಕಾರ್ಮಿಕರಿಗೆ ಹಾಗೂ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಕಾರ್ಮಿಕರಿಗೆ ಆಹಾರ ಸಾಮಾಗ್ರಿಯ ಕಿಟ್ ಹಸ್ತಾಂತರಿಸಲಾಯಿತು. ಲಯನ್ಸ್ ಕ್ಲಬ್ ಪ್ರಾಯೋಜಿತ ಕೊರೊನಾ ವೈರಸ್ ಜಾಗೃತಿ ಬಗೆಗಿನ ಮಾಹಿತಿ ಇರುವ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಎ.ಪಿ.ಪಿ. ಕಿರಣ್‍ಕುಮಾರ್, ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಲೋಬೋ, ಕಾರ್ಯದರ್ಶಿ ಕೃಷ್ಣ ಶೆಣೈ, ಖಜಾಂಜಿ ಹರಿಪ್ರಕಾಶ್, ಜೊತೆ ಕಾರ್ಯದರ್ಶಿ ಮಮ್ತಾಜ್ ಬೇಗಂ, ವಕೀಲರಾದ ಶಿವಕುಮಾರ್, ಚಿದಾನಂದ, ಲಯನ್ಸ್ ಕ್ಲಬ್ ಅಧ್ಯಕ್ಷ ವಸಂತ್ ಶೆಟ್ಟಿ, ಶ್ರದ್ಧಾ, ಮತ್ತು ಹರಿದಾಸ್ ಮುಂತಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.