ಪಿಡಬ್ಲ್ಯುಡಿ ಗುತ್ತಿಗೆದಾರರ ಸಂಘದಿಂದ 25 ಕುಟುಂಬಗಳಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಬೆಳ್ತಂಗಡಿ: ಕೊರೊನಾ ವೈರಸ್ ಹರಡದಂತೆ ತಡೆಯಲು ಲಾಕ್‍ಡೌನ್ ಘೋಷಿಸಿದ್ದರಿಂದ ಅಗತ್ಯ ಸಾಮಾಗ್ರಿ ಖರೀದಿಗೆ ತೀವ್ರ ಸಂಕಷ್ಟಕ್ಕೆ ಒಳಗಾದ ಸುಮಾರು ಇಪ್ಪತ್ತೈದು ಕುಟುಂಬಗಳಿಗೆ ಬೆಳ್ತಂಗಡಿಯ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಗುತ್ತಿಗೆದಾರರ ಸಂಘದಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. 

ಅಗತ್ಯ ಸಾಮಾಗ್ರಿಗಳಿಲ್ಲದೆ ತೀರ ಸಂಕಷ್ಟಕ್ಕೆ ಒಳಗಾಗಿರುವ ಲಾಯಿಲ ಮತ್ತು ಅಗರಿ ನಿವಾಸಿಗಳಿಗೆ ಬೆಳ್ತಂಗಡಿ ತಾಲೂಕು ಗುತ್ತಿಗೆದಾರರ ಸಂಘದ ವತಿಯಿಂದ ಮನೆ ಮನೆಗೆ ಹೋಗಿ ಆಹಾರ ಸಾಮಾಗ್ರಿಗಳ ಕಿಟ್ ಹಂಚಿದರು.

ಈ ಸಂದರ್ಭ ಪಿಡಬ್ಲ್ಯುಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ವಿನಯ ಹೆಗ್ಡೆ, ಮಾಜಿ ಅಧ್ಯಕ್ಷರಾದ ಗಿರಿರಾಜ್ ಬಾರಿತ್ತಾಯ, ಭಗವಾನ್ ಕನ್ಸ್ಟ್ರಕ್ಷನ್ಸ್ ವಿಶ್ವನಾಥ್ ಲಾಯಿಲ, ಗುತ್ತಿಗೆದಾರರಾದ ದಯಾನಂದ್ ಸಂಜಯ ನಗರ ಹಾಗೂ ಸಂಘದ ಇತರ ಸದ್ಯಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.