ನಿಡ್ಲೆ ಗ್ರಾಮ ಪಂಚಾಯತ್‍ನಲ್ಲಿ ಕಾರ್ಯಪಡೆ ಸಭೆ ನಿಡ್ಲೆ: ಕೊರೊನಾ ವೈರಸ್ ಹರಡದಂತೆ ತಡೆಯಲು ಮುಂಜಾಗೃತ ಕ್ರಮವಾಗಿ

ನಿಡ್ಲೆ: ಕೊರೊನಾ ವೈರಸ್ ಹರಡದಂತೆ ತಡೆಯಲು ಮುಂಜಾಗೃತ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮ ಪಂಚಾಯತ್‍ನಲ್ಲಿ ರಚಿಸಿದ ಕಾರ್ಯಪಡೆ ಸಭೆ ನಡೆಯಿತು.
ನಿಡ್ಲೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಎ.9ರಂದು ನಡೆದ ಗ್ರಾಮ ಮಟ್ಟದ ಕಾರ್ಯಪಡೆಯ ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಜನರಿಗೆ ಲಾಕ್‍ಡೌನ್‍ಗೆ ಸಹಕಾರ ನೀಡಲು ಮನವಿ ಮಾಡಬೇಕಾಗಿದೆ. ಪಡಿತರ ವಿತರಣಾ ಕೇಂದ್ರಗಳಲ್ಲಿ ಗ್ರಾಹಕರು ಪಡಿತರ ಪಡೆಯುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಮಾಸ್ಕ್ ಧರಿಸುವಂತೆ ಸೂಚಿಸಬೇಕು. ಬೇರೆ ಊರುಗಳಿಂದ ಬಂದವರ ಮಾಹಿತಿ ಮಾಹಿತಿ ಪಡೆದು ಮನೆಯಲ್ಲಿಯೇ ಇರುವಂತೆ ಸೂಚಿಸಿ ಸುರಕ್ಷಿತವಾಗಿರುವ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಬೇಕು ಎಂದು ಕಾರ್ಯಪಡೆ ಸದಸ್ಯರು, ಆರೋಗ್ಯ ಮತ್ತು ಆಶಾ ಕಾರ್ಯಕರ್ತರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ತಿಳಿಸಲಾಯಿತು.


ಈ ಸಂದರ್ಭದಲ್ಲಿ ಕಾರ್ಯಪಡೆ ಸದಸ್ಯರಿಗೆ ಮಾಸ್ಕ್ ವಿತರಿಸಲಾಯಿತು. ಪಂಚಾಯತ್ ಅಧ್ಯಕ್ಷರಾದ ಶುಭಾ ದೇವಧರ್, ಉಪಾಧ್ಯಕ್ಷರಾದ ರುಕ್ಮಯ್ಯ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.