ಅನಿವಾಸಿ ಭಾರತೀಯರನ್ನು ಕ್ವಾರಂಟೈನ್ನಲ್ಲಿಡಲು ಅಲ್ – ಮದೀನತ್ತುಲ್ ಮುನವ್ವರ ಮೂಡಡ್ಕ ಸಂಸ್ಥೆಯನ್ನು‌ ಬಿಟ್ಟುಕೊಡಲು ಸಿದ್ಧ: ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಂಙಳ್

ಬೆಳ್ತಂಗಡಿ: ಅನಿವಾಸಿ ಭಾರತೀಯರಿಂದಲೇ ಪ್ರಾರಂಭಗೊಂಡು ಧಾರ್ಮಿಕ, ಸಾಮಾಜಿಕ, ಮತ್ತು ಶೈಕ್ಷಣಿಕ ರಂಗಗಳಲ್ಲಿ ಉತ್ತಮ ರೀತಿಯಲ್ಲಿ ಸೇವೆ ಗೈಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾ ಸಂಸ್ಥೆ ಅಲ್ ಮದೀನತುಲ್ ಮುನವ್ವರ ಎಜುಕೇಶನ್ ಟ್ರಸ್ಟ್ (ಎ.ಎಮ್.ಇ.ಸಿ.) ಯನ್ನು ಪ್ರವಾಸಿಗಳಿಗೆ ಅಗತ್ಯವಾದರೆ ಕ್ವಾರಂಟೈನ್ ಆಗಿ ನೀಡಲು ಸಿದ್ಧ ಎಂದು ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಂಙಳ್ ಉಜಿರೆ, ಉಪಾಧ್ಯಕ್ಷ ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರ್ ಹಾಗೂ ಎ.ಎಮ್.ಇ.ಸಿ ಜನರಲ್ ಮ್ಯಾನೇಜರ್ ಅಶ್ರಫ್ ಸಖಾಫಿ ಮಾಡಾವು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಜೀವನೋಪಾಯಕ್ಕಾಗಿ ವಿದೇಶದಲ್ಲಿರುವ ನೂರಾರು ಕನ್ನಡಿಗರು ಕೋರೋನ ಭೀತಿಯಿಂದ ಸಂಕಷ್ಟದಲ್ಲಿದ್ದಾರೆ. ಹಲವು ದೇಶಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅವರ ಸುರಕ್ಷತೆಯನ್ನು ಸರಕಾರವು ಖಚಿತಪಡಿಸಬೇಕೆಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಅಶ್ರಫ್ ಸಖಾಫಿ ಮಾಡಾವು ಆಗ್ರಹಿಸಿದರು.

2006 ರಲ್ಲಿ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮೂಡಡ್ಕ ಎಂಬ ಕುಗ್ರಾಮದಲ್ಲಿ ಮರ್ಹೂಂ ಟಿ.ಎಚ್ .ಉಸ್ತಾದರು ಸ್ಥಾಪಿಸಿದ ಸಂಸ್ಥೆಯು ಇಂದು ಒಂದೇ ಸೂರಿನಡಿಯಲ್ಲಿ ಧಾರ್ಮಿಕ, ಲೌಕಿಕ ಶಿಕ್ಷಣಗಳೆರಡನ್ನೂ ನೀಡಿ ಸಮಾಜಕ್ಕೆ ಅವರನ್ನು ಉತ್ತಮ ನಾಯಕರುಗಳನ್ನಾಗಿ ನೀಡುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿಕೊಂಡು ಬರುತ್ತಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.