ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ವರ್ಷಾವಧಿ ಮೇಷ ಜಾತ್ರೆ ರದ್ದು

ಬಳ್ಳಮಂಜ: ಕೊರೊನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ಸರ್ಕಾರ ನಿರ್ಬಂಧಿಸಿರುವುದರಿಂದ ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕವಾಗಿ ಜರುಗುವ ಮೇಷ ಜಾತ್ರೆ (ಪಗ್ಗು ಜಾತ್ರೆ) ಯನ್ನು ರದ್ದುಪಡಿಸಿದೆ.


ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯು ದೇವಸ್ಥಾನದ ತಂತ್ರಿಗಳು, ದೈವಜ್ಞರು ಹಾಗೂ ಹಿರಿಯ ಅರ್ಚಕರಲ್ಲಿ ವಿಮರ್ಶಿಸಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಕ್ಷೇತ್ರದ ಭಕ್ತರು ಹಾಗೂ ಅಭಿಮಾನಿಗಳು ಮುಂದಿನ ದಿನಗಳಲ್ಲಿ ಈ ಹಿಂದಿನಂತೆಯೇ ಸಹಕರಿಸಬೇಕು ಎಂದು ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ.ಎಂ. ಹರ್ಷ ಸಂಪಿಗೆತ್ತಾಯ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.