HomePage_Banner_
HomePage_Banner_
HomePage_Banner_

ದೆಹಲಿಗೆ ಹೋಗಿ ಬಂದಿದ್ದ, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪಾಸಿಟಿವ್ ಬಂದಿದ್ದ ವ್ಯಕ್ತಿಯ ಪತ್ನಿಗೂ ಕೊರೊನಾ ಪಾಸಿಟಿವ್..ಆತಂಕದಲ್ಲಿ ಜನತೆ

ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾದ ದಿನದಂದೇ ಜಿಲ್ಲೆಯಲ್ಲಿ ಮತ್ತೊಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೆಲವು ದಿನಗಳಿಂದ ದೂರವಾಗಿದ್ದ ಆತಂಕ ಮತ್ತೆ ಮನೆಮಾಡತೊಡಗಿದೆ. ಈ ಬಗ್ಗೆ ರಾಜ್ಯದಿಂದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಜಿಲ್ಲೆಯ ವರದಿ ಇನ್ನಷ್ಟೇ ಬರಬೇಕಿದೆ.

ಉಪ್ಪಿನಂಗಡಿ ತಾಲೂಕಿನಲ್ಲಿ ಈ ಹಿಂದೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದ ವ್ಯಕ್ತಿಯ ಪತ್ನಿಯಲ್ಲಿ ಇದೀಗ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಇದೀಗ ಆತಂಕ ಹೆಚ್ಚಾಗಿದೆ. 12 ದಿನಗಳಲ್ಲಿ ದ.ಕ. ಜಿಲ್ಲೆಯಲ್ಲಿ ಯಾವುದೇ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಅದರ ಬಳಿಕ ಏಪ್ರಿಲ್ 17ರಂದು ಉಪ್ಪಿನಂಗಡಿ ಮೂಲದ ವ್ಯಕ್ತಿಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಅವರಿಗೆ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆದರೆ, ಅದೇ ವ್ಯಕ್ತಿಯ ಪತ್ನಿಯಲ್ಲಿ ಏಪ್ರಿಲ್ 19ರಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಮಾಹಿತಿ ಲಭಿಸಿದೆ. ಇನ್ನು ಇದೇ ದಿನ ಬಂಟ್ವಾಳ ಮೂಲದ ಮಹಿಳೆಯೊಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.