ತಾಲೂಕಿನ ಖಾಸಗಿ ಬಸ್‍ನ ಸಿಬ್ಬಂದಿಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್

ಬೆಳ್ತಂಗಡಿ: ಕೊರೊನಾ ವೈರಸ್ ಹರಡದಂತೆ ತಡೆಯಲು ಲಾಕ್‍ಡೌನ್ ಘೋಷಿಸಿದ್ದರಿಂದ ತಿಂಗಳಿಗೂ ಅಧಿಕ ಕಾಲ ಸಾರಿಗೆ ಸಂಚಾರವಿಲ್ಲದೇ ತಾಲೂಕಿನ ಖಾಸಗಿ ಬಸ್‍ನ ಸಿಬ್ಬಂದಿಗಳಿಗೆ ಅಗತ್ಯ ಸಾಮಾಗ್ರಿ ಖರೀದಿಸಲು ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು.

ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ಎ.29ರಂದು ಕೊರೊನಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ತಾಲೂಕಿನ ಖಾಸಗಿ ಬಸ್ ಸಿಬ್ಬಂದಿಗಳಿಗೆ ಆಹಾರ ಕಿಟ್‍ಗಳನ್ನು ವಿತರಿಸುವಂತೆ ಖಾಸಗಿ ಬಸ್ ನೌಕರರ ಸಂಘದ ಉಪಾಧ್ಯಕ್ಷ ಪದ್ಮಪ್ರಸಾದ್ ಸವಣಾಲು ಅವರ ಮನವಿ ಮೇರೆಗೆ ಎಲ್ಲಾ ಸಿಬ್ಬಂದಿಗಳಿಗೆ ನಿತ್ಯೋಪಯೋಗಿ ವಸ್ತುಗಳ ಕಿಟ್‍ಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೊಡಿ , ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ , ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಬಿ.ಕೆ ವಸಂತ್ , ನಗರ ಪಂಚಾಯತ್ ಸದಸ್ಯ ಡಿ. ಜಗದೀಶ್ , ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಪ್ಪ ಪೂಜಾರಿ , ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾ ಸಮಿತಿ ಸದಸ್ಯ ಪ್ರಭಾಕರ್ ಶಾಂತಿಕೋಡಿ , ಕಾಂಗ್ರೆಸ್ ಮುಖಂಡರಾದ ರಘು ಧರ್ಮಸೇನ್ , ಸತೀಶ್ ಶೆಟ್ಟಿ ದೊಡ್ಡಮನೆ , ಸುರೇಂದ್ರ ಕೋಟ್ಯಾನ್ , ಧನಂಜಯ (ಧನು) ಗುರುವಾಯನಕೆರೆ , ಜಿ.ವಿ ಹರೀಶ್ ಸವಣಾಲು , ಗಣೇಶ್ ಕಣಿಯೂರು, ಖಾಸಗಿ ಬಸ್ ನೌಕರರ ಸಂಘದ ಉಪಾಧ್ಯಕ್ಷ ಪದ್ಮಪ್ರಸಾದ್ ಸವಣಾಲು , ಪ್ರಧಾನ ಕಾರ್ಯದರ್ಶಿ ದೀಪಕ್ ಜಿ ರೆಂಕೆದಗುತ್ತು , ಕೋಶಾಧಿಕಾರಿ ಇಲ್ಯಾಸ್ ಕರಾಯ ಮುಂತಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.