ಬೆಂಗಳೂರು : ವಲಸೆ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ವಲಸೆ ಕಾರ್ಮಿಕರು ಊರಿಗೆ ಹೋಗಲು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಸಿಎಂ ಬಿ.ಎಸ್. ಯಡಿಯೂರಪ್ಪ ಈ ಕುರಿತು ಆದೇಶ ಹೊರಡಿಸಿದ್ದು, ವಲಸೆ ಕಾರ್ಮಿಕರು ಬೇರೆ ಬೇರೆ ಜಿಲ್ಲೆಗಳಿಗೆ ಹೋಗಲು ಇಂದಿನಿಂದ 3 ದಿನಗಳ ಕಾಲ ಉಚಿತ ಪ್ರಯಾಣಕ್ಕೆ ಅನುಮತಿ ನೀಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿಂತಾಗಿದೆ.
ಇನ್ನು ಬೆಂಗಳೂರಿನಿಂದ ತಮ್ಮ ಜಿಲ್ಲೆಗಳಿಗೆ, ಊರುಗಳಿಗೆ ತೆರಳುವ ಕಾರ್ಮಿಕರು 14 ದಿನ ಸ್ವಯಂ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚಿಸಲಾಗಿದೆ.