HomePage_Banner_
HomePage_Banner_

ಕಾರ್ಮಿಕರ ಉಚಿತ ಪ್ರಯಾಣಕ್ಕೆ ಬಸ್ ಸೌಲಭ್ಯ ಇನ್ನೂ ಎರಡು ದಿನ ವಿಸ್ತರಣೆ ಮೇ 7ರವರೆಗೆ ವಿಸ್ತರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ರಾಜಧಾನಿ ಬೆಂಗಳೂರು ಮತ್ತು ಜಿಲ್ಲಾ ಕೇಂದ್ರಗಳಿಂದ ವಲಸೆ ಕಾರ್ಮಿಕರು, ಕೂಲಿ ಕಾರ್ಮಿಕರು ತಮ್ಮ ಊರುಗಳಿಗೆ ಪ್ರಯಾಣಿಸಲು ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಇನ್ನು 2 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಈ ಮೊದಲು ಮೇ 5 ರವರೆಗೆ ಮಾತ್ರ ಈ ಸೌಲಭ್ಯ ಕಲ್ಪಿಸಲಾಗಿತ್ತು. ಆದರೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಪ್ರಯಾಣ ಸೌಲಭ್ಯವನ್ನು ಮೇ 7ರವರೆಗೆ ವಿಸ್ತರಿಸಲಾಗಿದೆ. ಕಾರ್ಮಿಕರು ಮತ್ತು ಇತರೆ ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ಊರುಗಳಿಗೆ ತೆರಳಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಊರಿಗೆ ಪ್ರಯಾಣಿಸಿದ 1500 ಮಂದಿ
ಮೇ 3ರಂದು 951 ಕೆ.ಎಸ್.ಆರ್.ಟಿ.ಸಿ. ಬಸ್ ಗಳನ್ನು ಒದಗಿಸಲಾಗಿದ್ದು ಅಂದಾಜು 30 ಸಾವಿರ ಜನರು ತಮ್ಮ ಊರುಗಳಿಗೆ ಪ್ರಯಾಣ ಮಾಡಿರುತ್ತಾರೆ. ಇವತ್ತು ಈಗಾಗಲೇ 50 ಬಸ್ ಗಳಲ್ಲಿ ಸುಮಾರು 1,500 ಪ್ರಯಾಣಿಕರು ತಮ್ಮ ಊರಿಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ 550 ಬಸ್ ಗಳು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ 400 ಬಸ್ ಗಳನ್ನು ಈ ಸೌಲಭ್ಯಕ್ಕೋಸ್ಕರ ಕಾಯ್ದಿರಿಸಲಾಗಿದೆ. ಶನಿವಾರದಂದು ಕೂಡ 550 ಬಸ್‍ಗಳಲ್ಲಿ ಅಂದಾಜು 16,500 ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ.

ರೈಲು ವ್ಯವಸ್ಥೆ:
ಮೇ 3ರಂದು ಎರಡು ರೈಲುಗಳು ಬಿಹಾರದ ಪಾಟ್ನಾ ಒಂದು ಜಾರ್ಖಂಡ್‍ನ ರಾಂಚಿಗೆ ತೆರಳಿವೆ. ಇದೇ ಸಮಯ ಒಡಿಶಾದ ಭುವನೇಶ್ವರಕ್ಕೆ ಒಂದು ರೈಲು, ಒಟ್ಟು ನಾಲ್ಕು ರೈಲುಗಳು 4,800 ಪ್ರಯಾಣಿಕರು ಆ ರಾಜ್ಯಗಳಿಗೆ ಕರೆದೊಯ್ದಿದೆ. ಮೇ 4ರಂದು ಎರಡು ರೈಲುಗಳು ರಾಜಸ್ಥಾನದ ಜೈಪುರ್ ಮತ್ತು ಬಿಹಾರದ ಪಾಟ್ನಾಕ್ಕೆ ಹೊರಡಲಿವೆ. ಪ್ರಯಾಣಕ್ಕಿಂತ ಮೊದಲು ಎಲ್ಲಾ ಜನರಿಗೂ ಉಚಿತ ಊಟ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.