HomePage_Banner_
HomePage_Banner_

ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ಬೋಳೂರಿನಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ

ಲಾಕ್ ಡೌನ್ ಸಡಿಲಿಕೆಯ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ರೋಗಿ ಸಂಖ್ಯೆ 536 ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 51 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.

ಬೋಳೂರಿನ 58 ವರ್ಷದ ಮಹಿಳೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕಳೆದ 15 ದಿನಗಳ ಹಿಂದೆ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಇಲ್ಲಿ ಪಿ-501 ಸಂಪರ್ಕಕ್ಕೆ ಬಂದಿದ್ದ ಇವರಿಗೆ ಸೋಂಕು ತಗುಲಿರುವುದು ಖಚಿತವಾಗಿತ್ತು. ಇದಾದ ಬಳಿಕ ಮೇ 1 ರಂದು ಮಹಿಳೆಯ 62 ವರ್ಷದ ಪತಿಯಲ್ಲೂ ಸೋಂಕು ದೃಢಪಟ್ಟಿತ್ತು.

ಇವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಬೋಳಾರಿನ ನಿವಾಸಿ, 51 ವರ್ಷದ ವ್ಯಕ್ತಿಗೂ ಇದೀಗ ಸೋಂಕು ಬಾಧಿಸಿದ್ದು, ಒಂದೇ ಪ್ರದೇಶದಲ್ಲಿ ಮೂವರು ಸೋಂಕು ಪೀಡಿತರಿದ್ದಾರೆ.ಈ ಮೂವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.