ಲಾಕ್‍ಡೌನ್ ಸಂಕಷ್ಟಕ್ಕೆ ಸಿಎಂ ಯಡಿಯೂರಪ್ಪರಿಂದ 1,610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

* ಮಹತ್ವದ ನಿರ್ಧಾರ ಘೋಷಿಸಿದ ರಾಜ್ಯ ಸರ್ಕಾರ ಕ್ಷೌರಿಕರಿಗೆ, ನೇಕಾರರಿಗೆ ಬಂಪರ್, ಮದ್ಯಪ್ರಿಯರಿಗೆ ಶಾಕ್!

ಬೆಂಗಳೂರು: ಲಾಕ್‍ಡೌನ್ ಸಂಕಷ್ಟದಲ್ಲಿರುವ ರಾಜ್ಯದ ಜನರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,610 ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ರಾಜ್ಯದ ಆರ್ಥಿಕ ಸ್ಥಿತಿಗತಿ ಉತ್ತಮ ಇಲ್ಲದೇ ಇದ್ದರೂ ರೈತರು ಹಾಗೂ ಸಣ್ಣ ಪುಟ್ಟ ಉದ್ಯೋಗಸ್ಥರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಲಾಕ್‍ಡೌನ್ ಪರಿಣಾಮ ಹೂ ಬೆಳೆಗಾರರು ಸಂಕಷ್ಟದಲ್ಲಿದ್ದು ಅವರ ನೆರವಿಗೆ ಸರ್ಕಾರ ಬಂದಿದ್ದು ಒಂದು ಹೆಕ್ಚೇರ್‍ಗೆ 25,000 ದಂತೆ ಪರಿಹಾರ ಧನ ಘೋಷಣೆ ಮಾಡಿದೆ. ಇದೇ ರೀತಿ ತರಕಾರಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಸರ್ಕಾರ ಚಿಂತನೆ ನಡೆದಿದೆ.

ಇನ್ನು ಕಟ್ಟಡ ಕಾರ್ಮಿಕರಿಗೆ ಹೆಚ್ಚುವರಿಗೆ 3000 ಪರಿಹಾರ ಘೋಷಣೆ ಮಾಡಲಾಗಿದೆ. ಇದರಿಂದ ಒಟ್ಟು ಕಟ್ಟಡ ಕಾರ್ಮಿಕರಿಗೆ ಒಟ್ಟು 5000 ಪರಿಹಾರ ನೀಡಿದಂತಾಗುತ್ತದೆ. ಕಾರ್ಮಿಕರು ರಾಜ್ಯದಿಂದ ಬಿಟ್ಟು ಹೊರ ಹೋಗದಿರಲು ಈ ಪರಿಹಾರ ಘೋಷಣೆ ಸಹಾಯಕವಾಗಲಿದೆ ಎಂದು ಬಿಎಸ್‍ವೈ ತಿಳಿಸಿದರು.

ಮುಖ್ಯಮಂತ್ರಿ ಬಿಎಸ್‍ವೈ ನಡೆಸಿದ ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು:
*ಲಾಕ್‍ಡೌನ್ ನಿಂದಾಗಿ ಎಲ್ಲ ದೇವಾಲಯಗಳು ಮುಚ್ಚಿರುವುದರಿಂದ ಹಬ್ಬ ಮದುವೆ, ಸಭೆ-ಸಮಾರಂಭಗಳು ಹಾಗೂ ಮತ್ತಿತರ ಯಾವುದೇ ಕಾರ್ಯಕ್ರಮಗಳು ಇಲ್ಲದ್ದರಿಂದ ಹೂವುಗಳ ಬೇಡಿಕೆ ಇಲ್ಲದೇ ಹೂವು ಬೆಳೆಗಾರರು ತಾವು ಬೆಳೆದಿರುವ ಎಲ್ಲ ಹೂವುಗಳು ಹೊಲದಲ್ಲೇ ನಾಶ ಮಾಡುವ ಪರಿಸ್ಥಿತಿ ಉದ್ಭವಿಸಿದೆ. ಒಟ್ಟಾರೆ 11687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದಿರುವ ಹೂವುಗಳು ಮಾರಾಟವಾಗದೆ ರೈತರಿಗೆ ನಷ್ಟವಾಗಿದೆ. ಇದರಿಂದ ಎಲ್ಲ ರೀತಿಯ ಹೂವುಗಳು ಬೆಳೆದಿರುವ ರೈತರಿಗೆ ನೆರವಾಗಲು ಸರ್ಕಾರವು ಹೆಕ್ಟೇರ್‍ಗೆ ಗರಿಷ್ಠ 25,000 ರೂ.ಗಳಂತೆ ಪರಿಹಾರ ಘೋಷಿಸಿದೆ.

* ಕೋವಿಡ್ 19 ರಿಂದಾಗಿ ರೈತರಷ್ಟೇ ಅಲ್ಲದೆ ಅಲ್ಲದೆ ಪಟ್ಟಣದ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಗಸರ ಹಾಗೂ ಕ್ಷೌರಿಕರ ವೃತ್ತಿಯಲ್ಲಿ ತೊಡಗಿರುವವರು ಒಂದೂವರೆ ತಿಂಗಳಿಗೆ ಮೇಲ್ಪಟ್ಟು ತಮ್ಮ ಕಸುಬು ನಡೆಸಲಾಗದೇ ದೈನಂದಿನ ಆದಾಯ ಕಳೆದುಕೊಂಡಿರುತ್ತಾರೆ. ಇವರಿಗೆ ನೆರವಾಗಲು ರಾಜ್ಯದಲ್ಲಿರುವ ಅಂದಾಜು 60,000 ಅಗಸರ ವೃತ್ತಿಯಲ್ಲಿ ಇರುವ ಹಾಗೂ 2,30,000 ಕ್ಷೌರಿಕ ವೃತ್ತಿಯಲ್ಲಿ ಇರುವವರಿಗೆ 5000 ರೂ.ಗಳನ್ನು ಒಂದು ಬಾರಿ ಪರಿಹಾರವಾಗಿ ನೀಡಲಾಗುವುದು.

*ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗಿದೇ ತಮ್ಮ ಆದಾಯವನ್ನು ಕಳೆದುಕೊಂಡಿರುತ್ತಾರೆ. ರಾಜ್ಯದಲ್ಲಿ ಇರುವ ಇಂತಹ 7,75,000 ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5000 ರೂಗಳನ್ನು ನೀಡಲಾಗಿದೆ.

* ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳನ್ನು ನಡೆಸುವ ಉದ್ದಿಮೆದಾರರು ತಮ್ಮ ಉದ್ದಿಮೆಗಳನ್ನು ತೆರೆಯಲಾಗಿದೆ ಹಾಗೂ ತಮ್ಮ ಉತ್ಪನ್ನಗಳನ್ನು ಸಾಗಿಸಿ ಮಾರಾಟ ಮಾಡಲಾಗದೆ ನಷ್ಟವನ್ನು ಅನುಭವಿಸಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ವಹಿವಾಟು ಚೇತರಿಕೆಯಾಗಲು ಕೆಲವು ತಿಂಗಳ ಸಮಯ ಬೇಕಾಗಿರುವುದರಿಂದ ಇವರಿಗೆ ಸರಕಾರ ನೆರವು ನೀಡುವುದು ಅನಿವಾರ್ಯವಾಗಿದೆ. ಆದ್ದರಿಂದ ಅತಿಸಣ್ಣ, ಸಣ್ಣ ಹಾಗೂ ಉದ್ಯಮ ಉದ್ದಿಮೆಗಳ ವಿದ್ಯುತ್ ಬಿಲ್ಲಿನ ನಿಗದಿತ ದರವನ್ನು ಎರಡು ತಿಂಗಳ ಅವಧಿಗೆ ಪೂರ್ತಿಯಾಗಿ ಮನ್ನಾ ಮಾಡಲಾಗಿದೆ.

* ಬೃಹತ್ ಕೈಗಾರಿಕೆಗಳಿಗೆ ಅವರು ವಿದ್ಯುತ್ ಇಲ್ಲಿನ ನಿಗದಿತ ದರದ ಪಾವತಿಯನ್ನು ಎರಡು ತಿಂಗಳ ಅವಧಿಗೆ ಯಾವುದೇ ಬಡ್ಡಿ ಅಥವಾ ದಂಡ ಇಲ್ಲದೇ ಬಡ್ಡಿ ರಹಿತವಾಗಿ ಮುಂದೂಡಲಾಗಿದೆ.

* ಎಲ್ಲ ವರ್ಗದ ಗ್ರಾಹಕರುಗಳಿಗೆ ವಿದ್ಯುತ್ ಮೊತ್ತವನ್ನು ಪಾವತಿಸಲು ಈ ಕೆಳಕಂಡ ಸವಲತ್ತು ಪರಿಹಾರಗಳನ್ನು ಒದಗಿಸುವುದು. ನಿಗದಿತ ಸಮಯದೊಳಗೆ ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪೆÇ್ರೀತ್ಸಾಹ ರಿಯಾಯಿತಿಯನ್ನು ನೀಡುವುದು. ವಿಳಂಬ ಪಾವತಿಗಾಗಿ ವಿದ್ಯುತ್ ಬಿಲ್ಲಿನ ಮೊತ್ತದ ಮೇಲೆ ವಿಧಿಸುವ ಬಡ್ಡಿಯ ಕಡಿಮೆಗೊಳಿಸಲಾಗುವುದು. ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪೆÇ್ರೀತ್ಸಾಹಧನ ನೀಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.

* ಕಂದಾಯ ಬಾಕಿ ಮೊತ್ತವನ್ನು ಕಂತುಗಳಲ್ಲಿ ಭಾಗವಾಗಿ ಪಾವತಿಸಲು ಅವಕಾಶ ಕಲ್ಪಿಸಲಾಗುವುದು.ಕಂದಾಯ ಬಾಕಿ ಮೊತ್ತವನ್ನು ಪಾವತಿಸದಿರುವ ಗ್ರಾಹಕರಿಗೆ ಜೂ.30ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಇರಲು ನಿರ್ಧಾರ ಮಾಡಲಾಗಿದೆ.

*ಇದಲ್ಲದೆ “ನೇಕಾರರ ಸಮ್ಮಾನ್ ಯೋಜನೆ” ಎಂಬ ಹೊಸ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಈ ಯೋಜನೆಯಡಿಯಲ್ಲಿ ರಾಜ್ಯದಲ್ಲಿರುವ ಅಂದಾಜು 54,000 ಕೈಮಗ್ಗ ನೇಕಾರರಿಗೆ ಪ್ರತಿ ವರ್ಷ 2000 ರೂ.ಗಳಂತೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು.
* ರಾಜ್ಯದಲ್ಲಿ ಮದ್ಯ ಪ್ರಿಯರಿಗೆ ಶಾಕ್ ನೀಡಿರುವ ಸರ್ಕಾರ ಮದ್ಯ ಮಾರಾಟದಲ್ಲಿನ ಸುಂಕವನ್ನು ಶೇ11ರಷ್ಟು ಹೆಚ್ಚಳ ಮಾಡಿದ್ದು, ಒಂದರೆಡು ದಿನಗಳಲ್ಲಿ ಸುಂಕ ಹೆಚ್ಚು ಅನ್ವಯವಾಗಲಿದೆ. ಒಟ್ಟು ಅಬಕಾರಿ ಸುಂಕವನ್ನು ಶೇ.17ರಷ್ಟು ಹೆಚ್ಚಳ ಮಾಡಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.